ಜ.12ರಂದು ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಎಸ್ ಬಂಗಾರಪ್ಪ ಸಭಾ ಭವನದ ಉದ್ಘಾಟನೆ

0
38

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಎಸ್ ಬಂಗಾರಪ್ಪ ಸಭಾ ಭವನವು ಜನವರಿ 12 ರಂದು ಭಾನುವಾರ ಉದ್ಘಾಟನೆ ಗೊಳ್ಳಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು ಹೇಳಿದರು.

ಅವರು ಗುರುವಾರ ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಜನವರಿ 12 ರಂದು ಬೆಳಿಗ್ಗೆ 8.30ಕ್ಕೆ ಕೋಟ ಅಮೃತೇಶ್ವರೀ ದೇವಸ್ಥಾನದಿಂದ ಸಹಕಾರ ಜಾಥಾ ಹೊರಡಲಿದ್ದು, ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಆನಂದ ಸಿ. ಕುಂದರ್ ಹಾಗೂ ಶ್ರೀ ಗುರುನರಸಿಂಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ಎಸ್. ಕಾರಂತರವರು ಸಹಕಾರ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ.

ಸಹಕಾರಿ ಸಚಿವರಾದ ಕೆ. ಎನ್. ರಾಜಣ್ಣನವರು ಸಂಘದ ಸ್ವಂತ ಕಟ್ಟಡವನ್ನು ಉದ್ಘಾಟಿಸಲಿದ್ದು, ಎಸ್. ಬಂಗಾರಪ್ಪ ಸಭಾಭವನವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್. ಮಧು ಬಂಗಾರಪ್ಪನವರು, ಕೇಂದ್ರ ಕಛೇರಿಯ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎಸ್. ರಾಜೇಂದ್ರ ಕುಮಾರ್‌ರವರು, ಶಾಖಾ ಕಛೇರಿಯನ್ನು ನಾಡೋಜ ಡಾ. ಜಿ. ಶಂಕರ್, ಆಡಳಿತ ಮಂಡಳಿ ಸಭಾಂಗಣವನ್ನು ಸಂಸದರಾದ ಕೆ. ಕೋಟ ಶ್ರೀನಿವಾಸ ಪೂಜಾರಿಯವರು, ಗ್ರಾಹಕರ ಭದ್ರತಾ ಕೋಶದ ಉದ್ಘಾಟನೆಯನ್ನು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು, ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆಯವರು, ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕರಾದ ಕಿರಣ್ ಕುಮಾ‌ರ್ ಕೊಡ್ಗಿಯವರು ನೆರವೇರಿಸಲಿದ್ದಾರೆ. ಸಂಭ್ರಮ ನಗದು ಪತ್ರವನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿಯವರು ಬಿಡುಗಡೆಗೊಳಿಸಲಿದ್ದಾರೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ರವರು ನೆರವೇರಿಸಲಿದ್ದಾರೆ.

Click Here

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ಕೊರಗ ಪೂಜಾರಿಯವರು ವಹಿಸಲಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾರ್ಕಳ ಶಾಸಕರಾದ ವಿ. ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹಾಗೂ ಕಿಶೋರ್ ಕುಮಾರ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಮೂರ್ತೆದಾರರ ಮಹಾಮಂಡಳದ ಅಧ್ಯಕ್ಷರಾದ ಸತೀಶ್ ಉಳ್ಳೂರು, ರಾಷ್ಟ್ರೀಯ ಬಿಲ್ಲವರ ಮಹಾಮಂಡಳ (ರಿ.) ಮೂಲ್ಕಿ ಇದರ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಅಸೋಸಿಯೇಶನ್ ಮಂಗಳೂರು ಇದರ ಅಧ್ಯಕ್ಷರಾದ ನವೀನ್‌ಚಂದ್ರ ಸುವರ್ಣ, ವಿಶ್ವನಾಥ ಕ್ಷೇತ್ರ ಕಟಪಾಡಿ ಅಧ್ಯಕ್ಷರಾದ ಬಿ. ಎನ್. ಶಂಕರ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಕೆ. ಆರ್ ಲಾವಣ್ಯ, ಕುಂದಾಪುರ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯ, ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ನಿ. ಮಂಗಳೂರು ಇದರ ಅಧ್ಯಕ್ಷರಾದ ಸಂಜೀವ ಪೂಜಾರಿ ಬೊಳ್ಳಾಯಿ. ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ. ಯವರಿಗೆ ಗೌರವಾರ್ಪಣೆ ನೀಡಲಾಗುವುದು ಎಂದು ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣುಯವರು ತಿಳಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here