ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಜ.2ರಂದು ಸಂಜೆ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಸಂದರ್ಭ ಬೋಟ್ ನಿಂದ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಗಂಗೊಳ್ಳಿ ಲೈಟ್ ಹೌಸ್ ನಿವಾಸಿ ನಾರಾಯಣ ಮೊಗವೀರ (58ವ) ಅವರ ಮನೆಗೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ನೇತೃತ್ವದ ನಿಯೋಗ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಮೀನುಗಾರಿಕೆಯ ವೇಳೆ ನಾರಾಯಣ ಮೊಗವೀರರು ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿ 7 ದಿನಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಪತ್ತೆಕಾರ್ಯ ಚುರುಕುಗೊಳಿಸುವಂತೆ ಮೀನುಗಾರರ ಮುಖಂಡರಾದ ಡಾ.ಜಿ.ಶಂಕರ್ ಮಾರ್ಗದರ್ಶನ ಪಡೆದುಕೊಂಡು ಮೊಗವೀರ ಮಹಾಜನ ಸೇವಾ ಸಂಘವು, ಮೀನುಗಾರಿಕಾ ಇಲಾಖೆ, ಪೊಲೀಸ್ ಇಲಾಖೆ, ಜನಪ್ರತಿನಿಧಿಗಳಿಗೆ ಮೊಗವೀರ ಮಹಾಜನ ಸಂಘವು ಈಗಾಗಲೇ ಮನವಿ ಮಾಡಿದೆ. ಮೀನುಗಾರಿಕಾ ಸಚಿವರಿಗೂ ಮನವಿ ಮಾಡಲಾಗಿದ್ದು ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡುವ ಬಗ್ಗೆ ಒತ್ತಾಯ ಮಾಡಲಾಗಿದೆ. ಅವರು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಎಂದು ಉದಯ ಕುಮಾರ್ ಹಟ್ಟಿಯಂಗಡಿ ತಿಳಿಸಿದರು.
ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘದ ಬಗ್ವಾಡಿ ಹೋಬಳಿ ಮಾಜಿ ಅಧ್ಯಕ್ಷರಾದ ಎಂ.ಎಂ.ಸುವರ್ಣ, ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ದಿನೇಶ ಕಾಂಚನ್, ಮಾಜಿ ಅಧ್ಯಕ್ಷ ರೋಹಿತಾಶ್ವ ಆರ್.ಕುಂದರ್, ಮಹೇಶ್ ನೆಂಪು, ಸುಕೇಶ್ ಮೊದಲಾದವರು ಹಾಜರಿದ್ದರು.