ವಿದ್ಯಾರಣ್ಯ ಶಾಲೆಯಲ್ಲಿ ಚೆಸ್ ಓರಿಯೆಂಟೇಶನ್ ಕಾರ್ಯಕ್ರಮ
ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಮಕ್ಕಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಸವಾಲುಗಳನ್ನು ಸ್ವೀಕರಿಸಿ ಎದುರಿಸಲು ಚೆಸ್ ಆಟ ಬಹಳ ಸಹಕಾರಿಯಾಗಿದೆ. ಚೆಸ್ ಆಟದ ಮೂಲಕ ಮಕ್ಕಳು ತಮ್ಮ ಏಕಾಗ್ರತೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯ. ಚೆಸ್ ಆಟದಿಂದ ಮಕ್ಕಳ ಸ್ಮರಣ ಶಕ್ತಿ ವೃದ್ಧಿಯಾಗುತ್ತದೆ ಮತ್ತು ಇದು ಕಲಿಕೆಯ ಮೇಲೆ ಉತ್ತಮ ಧನಾತ್ಮಕ ಪ್ರಭಾವವನ್ನು ಬೀರುತ್ತದೆ. ಚೆಸ್ ಆಟದಲ್ಲಿ ಆಸಕ್ತಿಯುಳ್ಳ ಮಕ್ಕಳಿಗೆ ಉತ್ತಮ ಮಾರ್ಗದರ್ಶನ ದೊರೆತರೆ ಅವರು ಮುಂದೆ ದೊಡ್ಡ ಸಾಧಕರಾಗಬಹುದು. ಏಕಾಗ್ರತೆ ಸ್ಮರಣಶಕ್ತಿ ಉತ್ತಮ ಭಾವನಾತ್ಮಕ ಕೌಶಲ್ಯಗಳನ್ನು ಚೆಸ್ ಆಟ ವೃದ್ಧಿಸುವುದರಿಂದ ಮಕ್ಕಳು ಬಹಳ ಉತ್ಸುಕತೆಯಿಂದ ಕಲಿಕೆಯಲ್ಲಿ ಸಾಗಲು ಸಾಧ್ಯವಾಗುತ್ತದೆ. ಈ ಸಂಸ್ಥೆಯ ಮಕ್ಕಳು ಕೂಡ ಉತ್ತಮ ಚೆಸ್ ಆಟಗಾರರಾಗಿ ಸಾಧನೆಯನ್ನು ಮಾಡಲಿ ಎಂದು ಅರ್ಜುನ್ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ಗ್ರಾಂಡ್ ಮಾಸ್ಟರ್ ಪ್ರವೀಣ್ ಎಂ. ತಿಪ್ಸೆ ಹೇಳಿದರು.
ಯಡಾಡಿ -ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಚೆಸ್ ಒರಿಯೆಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಪ್ರಶ್ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಮಾತನಾಡುತ್ತಾ ಚೆಸ್ ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅರ್ಜುನ್ ಪ್ರಶಸ್ತಿ ವಿಜೇತ ಪ್ರವೀಣ್ ಎಂ ತಿಪ್ಸೆ ಚೆಸ್ ಆಟದಲ್ಲಿ ಆಸಕ್ತಿ ಇರುವ ಮಕ್ಕಳಿಗೆ ಸ್ಪೂರ್ತಿಯ ಚಿಲುಮೆ ಮತ್ತು ಮಾದರಿ. ನಿರಂತರವಾದ ಪರಿಶ್ರಮ ಮತ್ತು ಆಸಕ್ತಿಯಿಂದ ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ. ಮಕ್ಕಳಿಗೆ ಯಶಸ್ಸು ನಿರಂತರವಾಗಿ ಸಿಗಲಿ ಎಂದರು.
ಕಾರ್ಯಕ್ರಮದಲ್ಲಿ ಅರ್ಜುನ್ ಪ್ರಶಸ್ತಿ ಪುರಸ್ಕೃತ ಅಂತರಾಷ್ಟ್ರೀಯ ಗ್ರಾಂಡ್ ಮಾಸ್ಟರ್ ಪ್ರವೀಣ್ ಎಂ. ತಿಪ್ಸೆ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ ಉಪಸ್ಥಿತರಿದ್ದರು.
ಸಹಶಿಕ್ಷಕಿ ಸಪ್ತಮಿ ಸ್ವಾಗತಿಸಿ ನಿರೂಪಿಸಿದರು.