ಕುಂದಾಪುರ: ಶ್ರೀ ಕ್ಷೇತ್ರ ಮಾರಣಕಟ್ಟೆಯಲ್ಲಿ ಮಕರಸಂಕ್ರಮಣ, ಜಾತ್ರೋತ್ಸವ ಸಂಪನ್ನ

0
105

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ, ಶ್ರೀ ಆದಿ ಶಂಕರಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕ್ಷೇತ್ರ ಎನ್ನುವ ಪ್ರಸಿದ್ಧಿಯನ್ನು ಹೊಂದಿರುವ ಶ್ರೀ ಕ್ಷೇತ್ರ ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಉತ್ಸವ ಹಾಗೂ ವಾರ್ಷಿಕ ಗೆಂಡ ಸೇವೆ, ಜಾತ್ರಾ ಮಹೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಆಗಮಿಸಿದರು.

ಜ.14ರ ಭಾನುವಾರ ಬೆಳಿಗ್ಗೆಯಿಂದಲೇ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ಕ್ಷೇತ್ರದ ಉತ್ಸವಕ್ಕಾಗಿ ಉಡುಪಿ ಹಾಗೂ ಮಂಗಳೂರು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯ ಭಕ್ತರು ಬಂದು ದೇವರ ದರ್ಶನ ಪಡೆದು, ಹೂ ಹಣ್ಣು ಕಾಯಿ ನೆರವೇರಿಸಿ, ಹರಕೆ ಸಲ್ಲಿಸಿರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಕೃಷ್ಣಮೂರ್ತಿ ಮಂಜ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಸುಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ , ವಂಡಬಳ್ಳಿ ಜಯರಾಮ್ ಶೆಟ್ಟಿ, ಡಾ ಅತುಲ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಶೆಟ್ಟಿ, ದೇಗುಲದ ಪಾತ್ರಿಗಳು,ಅರ್ಚಕರು ಗಣ್ಯರು ಉಪಸ್ಥಿತರಿದ್ದರು. ರಾತ್ರಿ ಗೆಂಡಸೇವೆ ನಡೆಯಲಿದೆ.

Click Here

LEAVE A REPLY

Please enter your comment!
Please enter your name here