ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕುಂದಾಪುರದ ಓಕ್‍ವುಡ್ ಇಂಡಿಯನ್ ಸ್ಕೂಲ್‍ನ 4ನೇ ತರಗತಿಯ ವಿದ್ಯಾರ್ಥಿ ಲಕ್ಷ್ ರಾಜೇಶ್ ಜ.12-2025 ರಂದು ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕೂಡ ಪ್ರಥಮ ಸ್ಥಾನ ಪಡೆದಿದ್ದಾನೆ.
ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯಮಟ್ಟದ ಐಡಿಯಲ್ ಪ್ಲೇ ಅಬಾಕಸ್ ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದನು. ಕುಂದಾಪುರದ ಸೆಂಟರ್ ಮುಖ್ಯಸ್ಥರಾದ ಪ್ರಸನ್ನ ಕೆ. ಬಿ. ಮತ್ತು ಮಹಾಲಕ್ಷ್ಮಿ ಇವರುಗಳಿಂದ ತರಬೇತಿ ಪಡೆಯುತ್ತಿರುವ ಲಕ್ಷ್ ರಾಜೇಶ್ ಅರಾಟೆಯ ರೇಷ್ಮಾ ಮತ್ತು ರಾಜೇಶ್ ದಂಪತಿಯ ಪುತ್ರ.