ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ, ಗೊಂಬೆಗಳ ಮತ್ತು ಆಟಿಕೆಗಳ ವೈವಿಧ್ಯಮಯ ಪ್ರದರ್ಶನವು ಸಂಸ್ಥೆಯ ಕಾರ್ಯದರ್ಶಿಗಳಾದ ರಾಧಕೃಷ್ಣ ಶೆಣೈರವರ ನೇತೃತ್ವದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರಾಧಕೃಷ್ಣ ಶೆಣೈರವರು ದೀಪ ಬೆಳಗಿಸುವುದರ ಮುಖೇನ ಚಾಲನೆಯನ್ನು ನೀಡಿದರು. ಚಿತ್ತಾಕರ್ಷಕವಾದ ಗೊಂಬೆಗಳು ಮತ್ತು ಆಟಿಕೆಗಳೊಂದಿಗೆ, ಪುಟಾಣಿಗಳ ಸಂಗೀತ ನರ್ತನವು ಎಲ್ಲರ ಮನಸೊರೆಗೊಂಡವು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜರವರು, ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜರವರು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಆಶ್ವಿನಿ ಎಲ್ಲರನ್ನೂ ಸ್ವಾಗತಿಸಿ ಸ್ವಪ್ನಾ ವಂದನಾರ್ಪಣೆಗೈದರು. ಹಾಗೂ ಶ್ರೀಲತಾರವರು ಕಾರ್ಯಕ್ರಮವನ್ನು ಸಂಯೋಜಿಸಿದರು.