ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ

0
73

ಕುಂದಾಪುರ ಮಿರರ್ ಸುದ್ದಿ…

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ ಯು ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ನಿವೃತ್ತ ಭೂಸೇನೆಯ ಜೂನಿಯರ್ ಆಫೀಸರ್ ಭಾಸ್ಕರ್ ಭೋವಿ ಸಂವಿಧಾನ ಶಿಲ್ಪಿ ಡಾI ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. 76ನೇ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ಸಂವಿಧಾನ ರಚನೆಗೆ ಶ್ರಮಿಸಿದ ಅನೇಕ ಮಹನೀಯರನ್ನು ಕೇವಲ ಈ ದಿನ ಸ್ಮರಿಸದೇ ಅವರ ಆದರ್ಶ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಂವಿಧಾನವನ್ನು ಗೌರವಿಸಿ ದೇಶದ ಪ್ರಗತಿಗೆ ಎಲ್ಲರೂ ಕೈ ಜೋಡಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಕೇವಲ ಐಟಿ ಬಿಟಿ ಕಡೆಗೆ ಹೆಚ್ಚಿನ ಒಲವು ತೋರದೆ ಭಾರತೀಯ ಸೈನ್ಯದಲ್ಲಿ ಸೇರ್ಪಡೆಗೊಂಡು, ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಶದ ರಕ್ಷಣೆಗೆ ಯಾವತ್ತೂ ಸಿದ್ದರಾಗಿರಬೇಕು ಎಂದು ಭಾರತೀಯ ಸೇನೆಯ ಸಂಪೂರ್ಣ ಮಾಹಿತಿಯನ್ನು ನೀಡಿ ತಮ್ಮ ಸೇವಾನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

Click Here

Click Here

ಮುಖ್ಯಶಿಕ್ಷಕ ಡಾI ರವಿದಾಸ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿ ಆಗಸ್ಟ್ 15 ರಂದು ಆಚರಿಸುವ ಸ್ವಾತಂತ್ರ್ಯ ದಿನಾಚರಣೆಯಷ್ಟೇ ಮಹತ್ವವನ್ನು ಹೊಂದಿರುವ ರಾಷ್ಟ್ರೀಯ ಹಬ್ಬವೆಂದರೆ ಅದು
ಗಣರಾಜ್ಯೋತ್ಸವ. ಆಗಸ್ಟ್ 15 ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಪಡೆದುಕೊಂಡ ದಿನವಾದರೆ, ಜನವರಿ 26 ರಾಜಪ್ರಭುತ್ವವನ್ನು ಕೊನೆಗಾಣಿಸಿ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡ ದಿನ ವಿಶ್ವದಲ್ಲೇ ಬೃಹತ್ ಲಿಖಿತ ಸಂವಿಧಾನವನ್ನು ಅಳವಡಿಸಿಕೊಳ್ಳುವ ಮೂಲಕ ಭಾರತವೊಂದು ಗಣರಾಜ್ಯವೆಂದು ಘೋಷಿಸಿದ ದಿನ. ಹೀಗಾಗಿಯೇ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವವನ್ನು ದೇಶದಾದ್ಯಂತ ಅದ್ದೂರಿಯಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಎಮರಾಲ್ಡ್, ಸಪಾಯರ್, ರೂಬಿ, ಟೋಪಾಜ್ ತಂಡಗಳಿಂದ ಆಕರ್ಷಕ ಪಥಸಂಚಲನ ವೀಕ್ಷಿಸಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ ಸರ್ವರಿಗೂ 76ನೇ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ಸಂಸ್ಥೆಯ ಉಪನ್ಯಾಸಕರು, ಬೋಧಕ ಮತ್ತು ಬೋಧಕೇತರ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿ ಅವಿನಾ ಡಿಸೋಜಾ ಸ್ವಾಗತಿಸಿ, ನಿರೂಪಿಸಿದರು ಉಪನ್ಯಾಸಕಿ ವೈಶಾಲಿ ಶೆಟ್ಟಿ ವಂದಿಸಿದರು.

Click Here

LEAVE A REPLY

Please enter your comment!
Please enter your name here