ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಸಾಲಿಗ್ರಾಮ ಪಟ್ಟಣ ಪಂಚಾಯತ್ 12ನೆ ಭಗವತಿ ವಾರ್ಡ್‍ನಲ್ಲಿ ಆನಂದ ಪೂಜಾರಿ ಇವರ ಮನೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಚಾಲನೆ ನೀಡದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಟರಾಜ್ ಹೊಳ್ಳ, ಸಾಲಿಗ್ರಾಮ ಪಟ್ಟಣದ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಅಮೀನ್ , ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯರಾದ ರವೀಂದ್ರ ಕಾಮತ್ ಗುಂಡ್ಮಿ, ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ಗಣೇಶ್ ಕೆ ನೆಲ್ಲಿಬೆಟ್ಟು ಉಪಸ್ಥಿತರಿದ್ದರು..