ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ವಿದ್ಯಾರ್ಥಿನಿ ಪ್ರತೀಕ್ಷಾ ಪಿ. ಶೆಟ್ಟಿ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ 2023-24 ನೇ ಸಾಲಿನಲ್ಲಿ ನಡೆಸಿದ ಎಂಕಾಂ ಪರೀಕ್ಷೆಯಲ್ಲಿ ದ್ವಿತೀಯ ರಾಂಕ್ ಪಡೆದು ಕಾಲೇಜಿಗೆ ಮತ್ತು ಪೋಷಕರಿಗೆ ಗೌರವ ತಂದಿರುತ್ತಾರೆ. ಇವರು ಸಿದ್ದಾಪುರದ ಪ್ರಭಾಕರ್ ಶೆಟ್ಟಿ ಮತ್ತು ಜಯಲಕ್ಷ್ಮಿ ಪಿ ಶೆಟ್ಟಿ ಇವರ ಪುತ್ರಿಯಾಗಿರುತ್ತಾರೆ. ತಂದೆ ಅಮಾಸೆಬೈಲು ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ಈ ಮಹತ್ತರ ಸಾಧನೆಯ ಸಂದರ್ಭದಲ್ಲಿ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟೆಹೊಳೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ವೆಂಕಟರಾಮ್ ಭಟ್ ಬೋಧಕ, ಬೋಧಕೇತರ ಸಿಬ್ಬಂದಿ, ಹಳೆ ವಿದ್ಯಾರ್ಥಿ ಸಂಘ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.