ಯಡಾಡಿ ಮತ್ಯಾಡಿ :ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಪೂರ್ವ ವಿದ್ಯಾರ್ಥಿಗಳ ಪದವಿ ಘಟಿಕೋತ್ಸವ

0
456

ಮಕ್ಕಳೊಂದಿಗೆ ಪೋಷಕರು ಸಮಯ ಕೊಟ್ಟಾಗ ಉತ್ತಮ ವಿದ್ಯಾರ್ಥಿಯಾಗಲು ಸಾಧ್ಯ – ವಂದನ ರೈ

ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ವಿದ್ಯಾರ್ಥಿಗಳು ಶಾಲೆ ಬಿಟ್ಟು ಮನೆಗೆ ಬಂದ ತಕ್ಷಣ ಒಂದಷ್ಟು ಹೊತ್ತು ಪೋಷಕರು ಮಕ್ಕಳೊಂದಿಗೆ ಸಮಯ ಕೊಡಬೇಕು ಮಕ್ಕಳೊಂದಿಗೆ ಆಟ ಆಡಬೇಕು ಮಕ್ಕಳೊಂದಿಗೆ ಶಾಲೆಯ ಚಟುವಟಿಕೆಗಳ ಬಗ್ಗೆ ಚರ್ಚಿಸಬೇಕು ಮಕ್ಕಳ ಬೆನ್ನು ತಟ್ಟುವ ಕೆಲಸ ಮಾಡಬೇಕು ಆಗ ವಿದ್ಯಾರ್ಥಿಗಳು ಮೊಬೈಲ್ ಕಡೆಗೆ ಹೆಚ್ಚು ಗಮನ ಕೊಡದೆ ಶಿಕ್ಷಣದ ಕಡೆಗೆ ಒತ್ತುಕೊಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ರಾಜ್ಯೋತ್ಸವ ಪುರಸ್ಕತೆ ವಂದನಾ ರೈ ಕಾರ್ಕಳ ಹೇಳಿದರು.

ಅವರು ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆಂಗ್ಲಮಾಧ್ಯಮ ಪ್ರಾಥಮಿಕ ಪೂರ್ವ ಶಾಲೆಯ ಕಿಂಡರ್ ಗಾರ್ಟನ್ ವಿದ್ಯಾರ್ಥಿಗಳ ಪದವಿ ಘಟಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Click Here

Click Here

ಕಾರ್ಯಕ್ರಮದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಡಳಿತ ಮಂಡಳಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಪಾಲಕರು ಮತ್ತು ಶಿಕ್ಷಕರು ಜೊತೆಯಾಗಿ ಮಗುವಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಣೆ ಮಾಡಿದಾಗ ಮಗುವಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು.

ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ಸುಜ್ಞಾನ ಎಜುಕೇಶನ್ ಟ್ರಸ್ಟ್ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ಕೊಡುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ ಪೋಷಕರ ನಿರೀಕ್ಷೆಯನ್ನು ಸುಜ್ಞಾನ ಎಜುಕೇಶನ್ ಟ್ರಸ್ಟ್ ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದರು.

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ. ಸ್ವಾಗತಿಸಿದರು. ಶಿಕ್ಷಕಿ ದೀಕ್ಷಾ ವಂದಿಸಿದರು.

ವಂದನಾ ರೈ ಪೋಷಕರಿಗೆ ಮತ್ತು ಮಕ್ಕಳಿಗೆ ನೃತ್ಯ ಮತ್ತು ಆಟೋಟ ಸ್ಪರ್ಧೆಯನ್ನು ನಡೆಸಿಕೊಟ್ಟರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು

Click Here

LEAVE A REPLY

Please enter your comment!
Please enter your name here