ಕುಂದಾಪುರ ಮಿರರ್ ಸುದ್ದಿ…
ಬೈಂದೂರು :ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರು ಮುಖ್ಯ ಅಂಚೆ ಕಛೇರಿಗಳಲ್ಲಿ ದೇಶದ ವಿವಿಧ ಸ್ಥಳಗಳಿಗೆ ತೆರಳುವ ಸಾರ್ವಜನಿಕರು/ಪ್ರಯಾಣಿಕರು ಮುಂಗಡವಾಗಿ ರೈಲ್ವೆ ಸೀಟುಗಳನ್ನು ಕಾಯ್ದಿರಿಸಿದ ಟಿಕೇಟ್ ಗಳನ್ನು ಬುಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ.
ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿಲ್ಲ. ಮುಂಗಡ ಟಿಕೇಟ್ ಗಳನ್ನು ಪಡೆಯದಿದ್ದಲ್ಲಿ ಈ ಸೌಲಭ್ಯವನ್ನು ರದ್ದುಪಡಿಸಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ಅದಕ್ಕೆ ಅವಕಾಶ ನೀಡದೇ ಸಾರ್ವಜನಿಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸದರಾದ ಬಿ.ವೈ. ರಾಘವೇಂದ್ರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.