ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕ ನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 44ರ ಸಂಭ್ರಮ, ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಮಾ.21ರ ಶುಕ್ರವಾರ ಸಂಜೆ 4.30ಕ್ಕೆ ನಡೆಯಲಿದ್ದು ಕೃಷಿ ಕ್ಷೇತ್ರದ ಸಾಧಕ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರದ ಯಡಬೆಟ್ಟು ಪರಿಸರದ ಹಿರಿಯ ಅನುಭವಿ ಕೃಷಿಕ ರಾಮಕೃಷ್ಣ ಐತಾಳ್ ಇವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.