ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ವಿಠಲವಾಡಿಯಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹೆಲಿಕಾಪ್ಟರ ದುರಂತದಲ್ಲಿ ಅಗಲಿದ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ತಮಿಳುನಾಡಿನ ವೆಲ್ಲಿಂಗ್ಟನ್ ಬಳಿಯ ಕೂನೂರಿನಲ್ಲಿ ಅಪಘಾತಕ್ಕೀಡಾದ ಭಾರತೀಯ ವಾಯುಸೇನೆಯ ಎಂಐ-17ವಿ5 ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ಅಪ್ಪಟ ದೇಶಪ್ರೇಮಿ, ದೇಶದ ಮೂರು ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಹಾಗೂ ಇತರ ಯೋಧರಿಗೆ ಕುಂದಾಪುರ ವಿಠಲವಾಡಿಯಲ್ಲಿ ಸಾರ್ವಜನಿಕರು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.
ಮಾಜಿ ಸೈನಿಕ ದಯಾನಂದ, ಕೀಳೇಶ್ವರಿ ಯೂತ್ ಕ್ಲಬ್ ನ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.