ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿಯಿಂದ ಪಡುಕರೆ ಸಂಪರ್ಕಿಸುವ ಹೊಸ ರಸ್ತೆ ಕ್ಲಿನಿಂಗ್ ಕಾರ್ಯಕ್ರಮ ಭಾನುವಾರ ಜರಗಿತು.
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್, ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಇವರುಗಳ ಸಹಯೋಗದೊಂದಿಗೆ 247ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನದ ಹಿನ್ನಲ್ಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿತು.
ಕೋಟ ಗ್ರಾಮಪಂಚಾಯತ್ ಮಣೂರು ವಾರ್ಡ್ ಸದಸ್ಯ ಶಿವರಾಮ ಶೆಟ್ಟಿ ಅಭಿಯಾನಕ್ಕೆ ಚಾಲನೆ ನೀಡಿದರು. ಸ್ಥಳೀಯರಾದ ಸತೀಶ್ ಶೆಟ್ಟಿ,ಮಣೂರು ಫ್ರೆಂಡ್ಸ್ ಗೌರವಾಧ್ಯಕ್ಷ ಸುರೇಶ್ ಆಚಾರ್, ಕೋಟ ಪಂಚಾಯತ್ ಮಾಜಿ ಸದಸ್ಯ ರವೀಂದ್ರ ಜೋಗಿ, ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಉಪಾಧ್ಯಕ್ಷ ದಿನೇಶ್ ಆಚಾರ್, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಇದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.