ಕುಂದಾಪುರ ಮಿರರ್ ಸುದ್ದಿ…
ಕೋಟ: ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಆಶ್ರಯದಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಎಜ್ಯುಕೇರ್ ಸಂಸ್ಥೆ ಕೋಟ, ಗ್ರಾಮಪಂಚಾಯತ್ ಕೋಟ ಇವರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ, ಪಿ.ಎಂ ವಿಶ್ವಕರ್ಮ ಯೋಜನೆ, ಮೀನುಗಾರಿಕಾ ಕಾರ್ಡ್, ರಿಕ್ಷಾ ಚಾಲಕರ ಇ. ಕಾರ್ಡ್ ಅಭಿಯಾನ ಮಾ. 26ರ ಬುಧವಾರ ಬೆಳಿಗ್ಗೆ 9.00ರಿಂದ ಸಂಜೆ 5 ಗ.ವರೆಗೆ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.