ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಮೂಡ್ಲಕಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಎರಡನೇ ಬಾರಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಇತ್ತೀಚೆಗೆ ನಡೆಯಿತು. ರೆಡ್ ಕ್ರಾಸ್ ಸಂಸ್ಥೆ ಚೇರ್ಮನ್ ರಕ್ತದಾನದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಲಯನ್ ಸಂದೀಪ್ ಶೆಟ್ಟಿ ಮತ್ತು ಲಯನ್ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಸಂಸ್ಥೆಯ ಡೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು .ಎನ್. ಎಸ್. ಎಸ್. ಕೋ – ಆರ್ಡಿನೇಟರ್ ಡಾ. ಶರವಣ ಕಾರ್ಯಕ್ರಮ ನಿರೂಪಿಸಿದರು.