ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಕೋಟದ ನೂತನವಾಗಿ ನಿರ್ಮಾಣಗೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಉಡುಪಿ ಇದರ ನೂತನವಾಗಿ ನಿರ್ಮಿಸಿದ ಹರಾಜು ಕಟ್ಟೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಲೋಕಾರ್ಪಣೆಗೊಳಿಸಿದರು.
ಈ ವೇಳೆ ಮಾತನಾಡಿದ ಶಾಸಕರು ಕೋಟದ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಯತ್ತ ದಾಪುಗಾಲು ಇರಿಸಿದೆ ಇದರ ಒಂದು ಭಾಗ ಇಂದು ಹರಾಜು ಮಾರುಕಟ್ಟೆಯನ್ನು ವ್ಯಾಪಾರಸ್ಥರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದು ಈ ಮಾರುಕಟ್ಟೆ ಕೃಷಿಕರಿಗೆ ಯೋಗ್ಯ ರೀತಿಯ ವಾತಾವರಣ ಸೃಷ್ಟಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕೋಟ ಅಮೃತೇಶ್ವರಿ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್, ಕಾರ್ಯದರ್ಶಿ ಗಾಯಿತ್ರಿ ರಾವ್ ,ಎ.ಪಿ.ಎಂ.ಸಿ ನಿಕಟಪೂರ್ವ ಉಪಾಧ್ಯಕ್ಷ ಕೃಷ್ಣ ಪೂಜಾರಿ, ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ , ಉಪಾಧ್ಯಕ್ಷ ಪಾಂಡು ಪೂಜಾರಿ, ಕೃಷಿಕ ರವೀಂದ್ರ ಐತಾಳ್, ಪಂಚಾಯತ್ ಸದಸ್ಯ ಚಂದ್ರ ಪೂಜಾರಿ, ಸುಧಾ ಎ ಪೂಜಾರಿ , ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಲಲಿತಾ ಪೂಜಾರಿ, ಎ.ಪಿ.ಎಂ.ಸಿ. ಸಿಬ್ಬಂದಿಗಳಾದ ಸುನಿತಾ, ಜಗನಾಥ್,ಗುತ್ತಿಗೆದಾರ ಸಂತೋಷ್ ಕೋಟ, ನಾಗರಾಜ್ ಗಾಣಿಗ, ಮಾಜಿ ಪಂಚಾಯತ್ ಸದಸ್ಯ ರವೀಂದ್ರ ಜೋಗಿ, ಕೋಟದ ಪಂಚವರ್ಣ ಯುವಕ ಮಂಡಲದ ಉಪಾಧ್ಯಾಕ್ಷ ದಿನೇಶ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕೋಟ ಪಂಚಾಯತ್ ಸದಸ್ಯ ಚಂದ್ರ ಆಚಾರ್ ಕಾರ್ಯಕ್ರಮ ನಿರೂಪಿಸಿದರು.