ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಸ್ಕೂಟರ್‍ಗೆ ಎದುರುಗಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರಿಬ್ಬರೂ ಸಾವನ್ನಪ್ಪಿದ ಘಟನೆ ಕುಂದಾಪುರ-ಸಿದ್ದಾಪುರ ರಸ್ತೆಯ ಬಳ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ ಮಾ.28ರಂದು ಸಂಭವಿಸಿದೆ.
ಬಸ್ರೂರು ಬಿ.ಎಚ್ ನಿವಾಸಿ ರಾಜೀವ ಶೆಟ್ಟಿ (64ವ) ಹಳ್ನಾಡು ನಿವಾಸಿ ಸುದೀರ್ ದೇವಾಡಿಗ (35ವ) ಮೃತಪಟ್ಟವರು.
ಸುಧೀರ ದೇವಾಡಿಗ ಅವರು ಸ್ಕೂಟರ್‍ನಲ್ಲಿ ರಾಜೀವ ಶೆಟ್ಟಿ ಅವರನ್ನು ಕುಳ್ಳಿರಿಸಿಕೊಂಡು ಬಸ್ರೂರು ಕಡೆಯಿಂದ ಕಂಡ್ಲೂರು ಕಡೆಗೆ ಹೋಗುತ್ತಿರುವಾಗ ಕಂಡ್ಲೂರು ಕಡೆಯಿಂದ ಬಸ್ರೂರು ಕಡೆಗೆ ಬರುತ್ತಿದ್ದ ಕಾರನ್ನು ಚಾಲಕ ಅಭಿಷೇಕ್ ಎಂಬುವವರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ರಸ್ತೆಯ ತೀರ ಬಲಕ್ಕೆ ಚಲಾಯಿಸಿ ಎದುರಿನಿಂದ ಬರುತ್ತಿದ್ದು ಸ್ಕೂಟರ್‍ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಸ್ಕೂಟರ್ ಸವಾರ ಹಾಗೂ ಸಹಸವಾರ ಇಬ್ಬರು ರಸ್ತೆಯ ಪಕ್ಕದ ಗದ್ದೆಗೆ ಬಿದ್ದಿದ್ದು ಸ್ಕೂಟರ್ ಸವಾರ ಸುಧೀರ ರವರ ತಲೆಗೆ ತೀವ್ರ ಸ್ವರೂಪದ ಗಾಯ ಹಾಗೂ ಸಹಸವಾರ ರಾಜೀವ ರವರ ಬಲಕಾಲಿಗೆ ತೀವ್ರ ಸ್ವರೂಪದ ಒಳನೋವು ಆಗಿದ್ದು, ಕೂಡಲೇ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಪರೀಕ್ಷಿಸಿದ ವೈದ್ಯರು ಇಬ್ಬರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು.
ಅಪಘಾತದ ರಭಸಕ್ಕೆ ಸ್ಕೂಟರ್ ರಸ್ತೆಯಿಂದ ಕೆಳಗೆ ಎಸೆಯಲ್ಪಟ್ಟಿದ್ದು ಸಂಪೂರ್ಣ ನುಜ್ಜುಗೊಜ್ಜಾಗಿದೆ.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.