ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : 2024-25 ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಎಕ್ಸಲೆಂಟ್ ಪ. ಪೂ ಕಾಲೇಜಿಗೆ ರಾಜ್ಯಮಟ್ಟದಲ್ಲಿ 10 ಸ್ಥಾನಗಳು ಬಂದಿದ್ದು, ಅತೀ ಹೆಚ್ಚು ರ್ಯಾಂಕ್‍ಗಳನ್ನು ಪಡೆದ ಕುಂದಾಪುರದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 306 ವಿದ್ಯಾರ್ಥಿಗಳಲ್ಲಿ 180 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 119 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 86 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ರಾಜ್ಯಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಎಂ .ಎಂ ಹೆಗ್ಡೆ ಎಜುಕೇಶನಲ್ ಹಾಗೂ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಎಂ. ಮಹೇಶ್ ಹೆಗ್ಡೆಯವರು, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಹಾಗೂ ಉಪನ್ಯಾಸಕರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.