ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ನಿಲಯಗಳ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ

0
32

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಸರಕಾರ ಹಿಂದುಳಿದ ವರ್ಗಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ವಸತಿ ನಿಲಯಗಳನ್ನು ಪ್ರಾರಂಭಿಸಿದೆ. ಮೆಟ್ರಿಕ್ ನಂತದ ವಿದ್ಯಾರ್ಥಿ ನಿಲಯಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಹಾಸ್ಟೆಲ್ ಸೀಟುಗಳನ್ನು ಹೆಚ್ಚಿಸಲು ಸರಕಾರ ಕ್ರಮಕೈಗೊಳ್ಳಬೇಕು. ಹಲವು ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಮೂಲಭೂತ ಸೌಲಭ್ಯಗಳಿದ್ದರೆ ಮಾತ್ರ ಇಂತಹ ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ, ವಾಸಿಸುವ ಮಕ್ಕಳಿಗೆ ಅನುಕೂಲವಾಗುತ್ತದೆ. ಎಲ್ಲಾ ಸೌಕರ್ಯಗಳು ಹಿಂದುಳಿದ ವರ್ಗಗಳ ಮಕ್ಕಳಿಗೆ ದೊರೆಯುವಂತಾಗಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಕುಂದಾಪುರ ಮೂಲ, ಹಂಗಳೂರು, ಶಂಕರನಾರಾಯಣ ಬೈಂದೂರು ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಕೆದೂರು, ಅಮಾಸೆಬೈಲು ಇವರ ಸಹಭಾಗಿತ್ವದಲ್ಲಿ ಹಂಗಳೂರಿನ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾದ ನಿಲಯಗಳ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Click Here

Click Here

ಕಾರ್ಯಕ್ರಮದ ಅಧ್ಯಕ್ಷತೆಯನ್ನು
ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಬಿಂದಿಯ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಪ್ರಭಾಕರ್, ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವೆಂಕಟರಮಣ ಭಟ್, ತಾಲೂಕು ಹಿಂದುಗಳಿದ ವರ್ಗಗಳ ಕಲ್ಯಾಣಾಧಿಕಾರಿ ಶಶಿಕಲಾ, ನಿವೃತ್ತ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಗಿರಿಧರ್ ಗಾಣಿಗ ಉಡುಪಿ ಮತ್ತಿತರರು ಉಪಸ್ಥಿತರಿದ್ದರು.

ಆಶಾ ದೇವಿ ಸ್ವಾಗತಿಸಿದರು. ಸ್ವಾತಿ ಕಾರ್ಯಕ್ರಮ ನಿರ್ವಹಿಸಿದರು.

Click Here

LEAVE A REPLY

Please enter your comment!
Please enter your name here