ಉಡುಪಿ :ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರರವರಿಗೆ “ವಿಕ್ರಮ ಪ್ರಶಸ್ತಿ” ಪ್ರದಾನ

0
25

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿಯವರಿಂದ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ವಿಕ್ರಮ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಗಣೇಶ ಮೊಗವೀರರವರಿಗೆ ಎ25ರಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಿದರು.

Click Here

Click Here

ಗಣೇಶ ಮೊಗವೀರರವರು ಹೆಮ್ಮಾಡಿಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಎರಡು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದು ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ಇವರ
ಶಿಕ್ಷಣ ಕ್ಷೇತ್ರದ ಸಾಧನೆ ಹಾಗೂ ಸೇವೆಯನ್ನು ಪರಿಗಣಿಸಿ ಗಣೇಶ ಮೊಗವೀರರವಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Click Here

LEAVE A REPLY

Please enter your comment!
Please enter your name here