ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಜನಪ್ರತಿನಿಧಿ ಪತ್ರಿಕೆ ಕುಂದಾಪುರ, ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಸ್ಥೆಗಳ ಸಹಯೋಗದಲ್ಲಿ ಕುಂದಾಪುರ ಶಾಸ್ತ್ರಿ ವೃತ್ತದ ಬಳಿಯ ಬಂಟರ ಯಾನೆ ನಾಡವರ ಸಂಘದ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಏ.27ರ ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ‘ಗ್ರಾಮ ಸ್ವರಾಜ್ಯ ಗತಿಸ್ಥಿತಿ ಚಿಂತನ’ ಕಾರ್ಯಕ್ರಮ ಆಯೋಜಿಸಿದೆ.
ಈ ಕಾರ್ಯಕ್ರಮವನ್ನು ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮತ್ತು ಗುರುರಾಜ ಗಂಟಿಹೊಳೆ ಉದ್ಘಾಟಿಸುವರು.
ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ಕಿಶೋರ್ ಕುಮಾರ್ ಪುತ್ತೂರು ಅತಿಥಿಗಳಾಗಿರುವರು. ನಿವೃತ್ತ ಐಎಎಸ್ ಅಧಿಕಾರಿ, ರಾಜ್ಯ ಮತ್ತು ಕೇಂದ್ರ ಸರಕಾರಗಳ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಾಗಿ ದುಡಿದಿದ್ದ ಟಿ. ಆರ್. ರಘುನಂದನ್ ದಿಕ್ಸೂಚಿ ಭಾಷಣ ಮಾಡುವರು. ಮೃಸೂರಿನ ಪಂಚಾಯತ್ ರಾಜ್ ಅಭಿವೃದ್ಧಿ ಕೇಂದ್ರದ ಮಾಜಿ ತರಬೇತಿ ವಿನ್ಯಾಸಕಾರ ವಿಲ್ಫ್ರೆಡ್ ಡಿಸೋಜ ಪ್ರತಿಕ್ರಿಯಿಸುವರು. ಆ ಬಳಿಕ ನಡೆಯುವ ಸಂವಾದ ಕಾರ್ಯಕ್ರಮವನ್ನು ಒಕ್ಕೂಟದ ಕಾನೂನು ಸಲಹೆಗಾರ ಟಿ. ಬಿ. ಶೆಟ್ಟಿ ನಿರ್ವಹಿಸುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಸಮಾರೋಪದ ನುಡಿಗಳನ್ನಾಡುವರು. ಕುಂದಾಪುರ ಮತ್ತು ಬೈಂದೂರು ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರು, ಆಸಕ್ತ ನಾಗರಿಕರು ಭಾಗವಹಿಸಬೇಕು ಎಂದು ಸಂಘಟಕರು ಕೋರಿದ್ದಾರೆ.