ಕಾರ್ಕಡ- ಕರ್ಣಾಟಕ ಬ್ಯಾಂಕ್ ವತಿಯಿಂದ ಶಾಲಾ ವಾಹನ ಕೊಡುಗೆ

0
686

ಕುಂದಾಪುರ ಮಿರರ್ ಸುದ್ದಿ…
ಕೋಟ:
ಸಾಲಿಗ್ರಾಮದ ಕಾರ್ಕಡ ಹೊಸ ಹಿರಿಯ ಪಾರ್ಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ಮಂಗಳೂರು ವತಿಯಿಂದ ಕೊಡುಗೆಯಾಗಿ ನೀಡಿದ ಶಾಲಾ ವಾಹನವನ್ನು ಡಿ.26 ರಂದು ಭಾನುವಾರ ಕರ್ನಾಟಕ ಬ್ಯಾಂಕ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಮ್.ಎಸ್ ಹಸ್ತಾಂತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಅನಂತಪದ್ಮನಾಭ ಐತಾಳ ವಹಿಸಿದ್ದರು.

Click Here

Click Here

ಈ ಸಂದರ್ಭದಲ್ಲಿ ಶಾಲೆಗೆ ವಿದ್ಯಾರಥವನ್ನು ಕೊಡುಗೆಯಾಗಿ ನೀಡಿದ ಕರ್ಣಾಟಕ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ್ ಎಮ್ ಎಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಮುಖ್ಯ ಅಥಿತಿಗಳಾಗಿ ಮಣೂರು ಗೀತಾನಂದ ಫೌಂಡೇಶನ್ ಟ್ರಸ್ಟ್ ನ ಪ್ರವರ್ತಕರಾದ ಆನಂದ್ ಸಿ ಕುಂದರ್ ,ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ನಿಬಂಧಕರಾದ ರಾಜಗೋಪಾಲ್ ಬಿ.ಅರವಿಂದ ಮೋಟರ್ಸ್ ಕುಂದಾಪುರ ಇದರ ಸೀನಿಯರ್ ಮ್ಯಾನೇಜರ್ ಸತೀಶ್ ಗಾಣಿಗ,ಸಾಲಿಗ್ರಾಮಪಟ್ಟಣ ಪಂಚಾಯಿತಿ ಸದಸ್ಯೆ ಗಿರಿಜಾ ಶೇಖರ್ ಪೂಜಾರಿ, ವಿದ್ಯಾರಥ ಸಮಿತಿ ಅಧ್ಯಕ್ಷ ವಿಶ್ವನಾಥ ಹೊಳ್ಳ, ಸದಸ್ಯರಾದ ಆನಂದ ಆಚಾರ್ಯ, ಕೆ ಪಿ ಶೇಖರ್, ಅಚ್ಚುತ ಪೂಜಾರಿ, ಮಾಧವ ಕಾರ್ಕಡ ಹಾಗೂ ಪಂ. ಪಂಚಾಯತ್ ಸದಸ್ಯರಾದ ಸಂಜೀವ ದೇವಾಡಿಗ, ರಾಜು ಪೂಜಾರಿ, ಗಣೇಶ ಬಿ.ಮೊದಲದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪ್ರಭಾಕರ್ ಕಾಮತ್ ಸ್ವಾಗತಿಸಿದರು. ಶಾಲಾ ಅಧ್ಯಾಪಕ ಕೆ. ನಾರಾಯಣ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷರಾದ ಕೆ. ತಾರಾನಾಥ ಹೊಳ್ಳ ವಂದಿಸಿದರು.

Click Here

LEAVE A REPLY

Please enter your comment!
Please enter your name here