ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯ, ಶಾಲೆಯ ಪೂರ್ವ ವಿದ್ಯಾರ್ಥಿ ಪ್ರಶಾಂತ್ ಪೂಜಾರಿ ವಂಡ್ಸೆ ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿಗೆ ಎರಡು ಕಂಪ್ಯೂಟರ್‍ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಕೊಡುಗೆಯನ್ನು ಶಾಲೆಗೆ ಹಸ್ತಾಂತರಿಸಿ ಮಾತನಾಡಿದ ಅವರು, ಇದು ನಾನು ಓದಿದ ಶಾಲೆಯಾಗಿದ್ದು ಈ ಶಾಲೆಗೆ ನನ್ನಿಂದಾದ ಕೊಡುಗೆ ಸಾಧ್ಯವಾದಷ್ಟು ನೀಡುವುದರೊಂದಿಗೆ ಇತರ ಮೂಲಗಳಿಂದ ಕೊಡಿಸುವ ಭರವಸೆ ನೀಡಿದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಂಜುನಾಥ ಎ.ಜಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಕಂಪ್ಯೂಟರ್‍ಗಳ ಕೊರತೆ ಇತ್ತು. ಇದೀಗ ಶಾಲಾ ಹಳೆವಿದ್ಯಾರ್ಥಿ ಪ್ರಶಾಂತ್ ಪೂಜಾರಿ ಅವರು ಕೊಡುಗೆ ನೀಡಿರುವುದು ಸಂತಷ ತಂದಿದೆ ಎಂದರು.
ಗ್ರಾಮ ಪಂಚಾಯತಿ ಸದಸ್ಯೆ ಶಶಿಕಲಾ ಎಸ್ ಶುಭ ಹಾರೈಸಿದರು. ಶಾಲಾ ವತಿಯಿಂದ ಕೊಡುಗೆ ನೀಡಿದ ಪ್ರಶಾಂತ್ ಪೂಜಾರಿಯವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ರವಿಚಂದ್ರ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರು, ಸದಸ್ಯರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಚಂದ್ರ ನಾಯ್ಕ್ ಎಚ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಆಶಾ ಸ್ವಾಗತಿಸಿ, ವಂದಿಸಿದರು.