ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುಂದಾಪುರದ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ವೇಳೆ ನಡೆದಿದೆ.
ಕುಂದಾಪುರದ ಗೀತಾ (32), ಅವರ ತಾಯಿ ಶಾರದಾ (60) ಹಾಗೂ ಮಗಳು ದೃತಿ (5) ಮೃತಪಟ್ಟವರೆಂದು ತಿಳಿದುಬಂದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ನಾಗೇಶ (65), ದಯಾನಂದ (66) ಹಾಗೂ ಸುಧೀಂದ್ರ (35) ಎಂಬವರು ಗಾಯಗೊಂಡಿದ್ದು, ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಕುಟುಂಬದ ಈ ಆರು ಮಂದಿ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಜೋಡಿ ಶ್ರೀರಂಗಾಪುರದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ.
ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ