ಕುಂದಾಪುರ ಮಿರರ್ ಸುದ್ದಿ…
ಕೋಟ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಡುಪಿ ಇದರ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ , ಹೆಸಕುತ್ತೂರು ಇಲ್ಲಿನ ಸಹಶಿಕ್ಷಕರಾಗಿರುವ ರವೀಂದ್ರ ನಾಯಕ್ 400 ಮೀ ಓಟದಲ್ಲಿ ಪ್ರಥಮ ಸ್ಥಾನ, 800 ಮೀ ಓಟದಲ್ಲಿ ಪ್ರಥಮ ಸ್ಥಾನ, ಕಬಡ್ಡಿಯಲ್ಲಿ ದ್ವಿತೀಯ ಸ್ಥಾನದೊಂದಿಗೆ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.