ಕುಂದಾಪುರ ಮಿರರ್ ಸುದ್ದಿ.
ಕುಂದಾಪುರ: ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಧ್ವಜ ಪ್ರತಿಷ್ಠಾ, ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರ ಬ್ರಹ್ಮರಥೋತ್ಸವಶ್ರೀ ಮನ್ಮ ಹಾರಥೋತ್ಸವ ಸಂಭ್ರಮದಿಂದ ಜರುಗಿತು.
ಬೆಳಿಗ್ಗೆ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿಗಳು ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು.
ಹಬ್ಬದ ಅಂಗವಾಗಿ ಕುಂದಾಪುರ ಡಿವೈಎಸ್‌ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.