ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಹುಟ್ಟೂರ ಸನ್ಮಾನ ಸಮಿತಿ ವಕ್ವಾಡಿ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ವಕ್ವಾಡಿಯ ಸಮಸ್ತ ನಾಗರೀಕರು ಒಟ್ಟಾಗಿ ಸೇರಿ ಸಂಭ್ರಮಿಸಬೇಕು ಎನ್ನುವ ಹಿನ್ನೆಲೆಯಲ್ಲಿ ಫೆ.27 ಆದಿತ್ಯವಾರ ವಕ್ವಾಡಿಯಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಅಧ್ಯಕ್ಷರಾದ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.
ಅವರು ಫೆ.18ರಂದು ವಕ್ವಾಡಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.
ಕಾವಡಿ ಮೇಲ್ಮನೆ ನಾರಾಯಣ ಶೆಟ್ಟಿ ಮತ್ತು ವಕ್ವಾಡಿ ಸಾರ್ಕಲ್ಲು ಮನೆ ಸರೋಜಿನಿ ಶೆಡ್ತಿಯವರ ಪುತ್ರನಾಗಿ ಜನಿಸಿದ ಇವರು ಕಾವಾಡಿಯಲ್ಲಿ ಪ್ರಾಥಮಿಕ ಶಿಕ್ಷಣ, ಕೋಟೇಶ್ವರದಲ್ಲಿ ಪ್ರೌಢಶಿಕ್ಷಣ ಮುಗಿಸಿ, ಭಂಡಾರ್ಕಾಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದು ದುಬೈಗೆ ತೆರಳಿ ಉದ್ಯಮ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿದವರು. ಸಾಧ್ಯವೆಂದರೆ ಸಾಧನೆ ಎನ್ನುವ ಮನೋಭೂಮಿಕೆಯಿಂದ ಪ್ರವೀಣ ಶೆಟ್ಟಿ ಇವತ್ತು ಮಾದರಿಯಾಗಿದ್ದಾರೆ ಎಂದರು.
ಆ ದಿನ ಬೆಳಿಗ್ಗೆ 9 ಗಂಟೆಯಿಂದ ಉಡುಪಿ ಪ್ರಸಾದ್ ನೇತ್ರಾಲಯದ ತಜ್ಞ ವೈದ್ಯರಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ, ಶಸ್ತ್ರಚಿಕಿತ್ಸೆ ಅಗತ್ಯವುಳ್ಳವರಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಅದೇ ಸಂದರ್ಭದಲ್ಲಿ ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಅಪರಾಹ್ನ 2 ಗಂಟೆಗೆ ಆಹ್ವಾನಿತ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಸ್ಪರ್ಧೆ ನಡೆಯಲಿದೆ. ವಿಜೇತ ತಂಡಕ್ಕೆ ಫಲಕ, ನಗದು ಬಹುಮಾನ ನೀಡಲಾಗುವುದು ಎಂದರು.
ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹುಟ್ಟೂರ ಸನ್ಮಾನ ಸಮಿತಿ ಕಾರ್ಯದರ್ಶಿ ವೇಣುಗೋಪಾಲ ಹೆಗ್ಡೆ ಮಾತನಾಡಿ, ಸಂಜೆ 5 ಗಂಟೆಗೆ ಅಭಿನಂದನಾ ಸಮಾರಂಭ ನಡೆಯಲಿದ್ದು, ಶ್ರೀ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಧಾರ್ಮಿಕ, ರಾಜಕೀಯ, ಗಣ್ಯರು, ಚಲನಚಿತ್ರ ನಟರು ಭಾಗವಹಿಸಲಿದ್ದಾರೆ. ರಾತ್ರಿ 8.30ಕ್ಕೆ ಆಳ್ವಾಸ್ ಪ್ರತಿಷ್ಠಾನ ಮೂಡಬಿದ್ರೆ ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ವೈಭವ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಸಾಮೂಹಿಕ ಭೋಜನ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು.
ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟರ ಸಾಧನೆ, ಅವರು ಹುಟ್ಟೂರಿಗೆ ನೀಡಿದ ಕೊಡುಗೆ ಅಪಾರವಾದುದು. ಮುಖ್ಯವಾಗಿ ಉಲ್ಲೇಖಿಸುವುದಾದರೆ ವಕ್ವಾಡಿಯ ಗ್ರಾಮದೇವತೆ ಮಹಾಲಿಂಗೇಶ್ವರ ದೇವಸ್ಥಾನ ಇವರ ನೇತೃತ್ವದಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ 2012ರಲ್ಲಿ ಜೀರ್ಣೋದ್ದಾರಗೊಂಡಿತ್ತು. ವೈಯಕ್ತಿಕವಾಗಿ ಅವರು 25 ಲಕ್ಷ ರೂ ದೇಣಿಗೆ ನೀಡಿದ್ದರು. ವಕ್ವಾಡಿಯ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಹೊಸ ಕಟ್ಟಡಕ್ಕಾಗಿ ರೂ.5 ಲಕ್ಷ ನೀಡಿದ್ದಾರೆ. ವಕ್ವಾಡಿಯಲ್ಲಿ ಬಸ್ ನಿಲ್ದಾಣ, ಅಂಚೆ ಕಛೇರಿಗೆ ಹೊಸ ಕಟ್ಟಡ ನಿರ್ಮಿಸಿಕೊಟ್ಟಿದ್ದಾರೆ. ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳೆರಡಕ್ಕೂ ಅಗತ್ಯ ಮೂಲಭೂತ ಸೌಕರ್ಯಗಳಿಗಾಗಿ ದೇಣಿಗೆ ನೀಡಿದ್ದಾರೆ. ವಕ್ವಾಡಿ ಪ್ರಾಥಮಿಕ ಶಾಲೆಗೆ ಉಚಿತ ವಾಹನದ ವ್ಯವಸ್ಥೆ ಅಲ್ಲದೇ ವಕ್ವಾಡಿಯ ಯಾವುದೇ ವ್ಯಕ್ತಿ ಕಷ್ಟ ಎಂದಾಗ ಉದಾರವಾಗಿ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ತನ್ನ ಉದ್ಯಮ ಕ್ಷೇತ್ರದ ಮೂಲಕವೂ ಹಲವಾರು ಮಂದಿ ಸ್ಥಳೀಯರಿಗೇ ಉದ್ಯೋಗವಕಾಶಗಳನ್ನು ನೀಡಿ ದ್ದಾರೆ ಎಂದರು.
ಸುದ್ದೀಗೋಷಚ್ಠಿಯಲ್ಲಿ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಡಾ.ಸುಧಾಕರ ನಂಬಿಯಾರ್, ಬಾಲಕೃಷ್ಣ ಶೆಟ್ಟಿ, ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಸತೀಶ್ ಪೂಜಾರಿ ವಕ್ವಾಡಿ ವಂದಿಸಿದರು.