ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು, ವಂಡ್ಸೆ ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಂಡ್ಸೆ ವಲಯ ಮತ್ತು ಭಜನಾ ಪರಿಷತ್ ವಂಡ್ಸೆ ವಲಯ ಇವರ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಿಳಾ ಭಜನಾ ಮಂಡಳಿ ಉದ್ಘಾಟನೆ ಫೆ 27ರಂದು ಆದಿತ್ಯವಾರ ವಂಡ್ಸೆ ನೂಜಾಡಿ ಕ್ರಾಸ್‍ನಲ್ಲಿರುವ ಮಹಾತ್ಮ ಗಾಂಧಿ ಸಭಾ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 8-30ಕ್ಕೆ ವೇ.ಮೂ.ದಿನಕರ ಉಡುಪ ಹರವರಿ ಅವರ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ. ಪೂರ್ವಾಹ್ನ 11 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಜನಜಾಗೃತಿ ವೇದಿಕೆಯ ಗೌರವಾಧ್ಯಕ್ಷರಾದ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸುವರು. ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ ಭಜನಾ ಮಂಡಳಿಯನ್ನು ಉದ್ಘಾಟಿಸಲಿದ್ದಾರೆ. ಧ.ಗ್ರಾ ಯೋಜನೆ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರಾದ ಗಣೇಶ್ ಬಿ, ಹೈದರಬಾದ್ ಉದ್ಯಮಿ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ, ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ತಿರುಮಲ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಗಿಳಿಯಾರು ಶ್ರೀಧರ ಶೆಟ್ಟಿ, ದೇವಳದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.