ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಅಘೋರೇಶ್ವರ ದೇವಸ್ಥಾನ ಕಾರ್ತಟ್ಟು ಚಿತ್ರಪಾಡಿಯಲ್ಲಿ ಮಹಾಶಿವರಾತ್ರಿ ಆಚರಣೆ ನಡೆಯಲಿದ್ದು ಆ ಪ್ರಯುಕ್ತ ರುದ್ರಹೋಮ,ರುದ್ರಾಭಿಷೇಕ ಹಾಗೂ ರಂಗಪೂಜಾದಿ ಧಾರ್ಮಿಕ ಕಾರ್ಯಕ್ರಮ ಜರುಗಲಿದ್ದು ಬೆಳ್ಳಿಗ್ಗೆ ಭಜನಾ ಕಾರ್ಯಕ್ರಮ ನಡೆಯಲಿದೆ .ಸಂಜೆ ದೇವಳದ ಸಭಾಂಗಣದಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ಜರುಗಲಿದ್ದು ಕುವೆಂಪು ವಿಶ್ವವಿದ್ಯಾನಿಲಯದ ಪಿ ಎಚ್ ಡಿ ಪುರಸೃತ ಡಾ.ಬಾಲಕೃಷ್ಣ ನಕ್ಷತ್ರಿ ಯವರಿಗೆ ಗೌರವ ಸಂಮಾನ ಕಾರ್ಯಕ್ರಮತದನಂತರ ಗಾನ ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ದೇವಸ್ಥಾನ ದ ಆಡಳಿತ ಮಂಡಳಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ