ಕುಂದೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಮಹೋತ್ಸವ

0
345

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶ್ರೀ ಕುಂದೇಶ್ವರದಲ್ಲಿ ಮಹಾಶಿವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ನಡೆದಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕುಂದೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿವಿಧ ಪೂಜೆಗಳನ್ನು ಸಲ್ಲಿಸಿ ಶಿವನ ಅನುಗ್ರಹಕ್ಕೆ ಪಾತ್ರರಾದರು.

Click Here

ಕುಂದಾಪುರದ ಅದಿದೇವತೆ, ಶಿವಕ್ಷೇತ್ರವಾದ ಕುಂದೇಶ್ವರನ ದೇವಳದಲ್ಲಿ ಪ್ರತಿವರ್ಷ ಮಹಾಶಿವರಾತ್ರಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶಿವನ ದರ್ಶನ ಪಡೆದು ಪುನೀತರಾಗುತ್ತಾರೆ. ಈ ವರ್ಷವೂ ಕೂಡ ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದು ಕಂಡು ಬಂತು. ಮಹಾಶಿವರಾತ್ರಿಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ, ಸಮಿತಿ ಸದಸ್ಯರು, ಅರ್ಚಕವೃಂದದವರು ಉಪಸ್ಥಿತರಿದ್ದರು.

 

Click Here

LEAVE A REPLY

Please enter your comment!
Please enter your name here