ಪಡುಕೆರೆ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ
ಕುಂದಾಪುರ ಮಿರರ್ ಸುದ್ದಿ…
ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ-ಪಡುಕೆರೆ ಇಲ್ಲಿನ 2021-22ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಕಾರ್ಯಕ್ರಮ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರವನ್ನು ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ.ಸಿ.ಕುಂದರ್ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಒಂದು ವಿದ್ಯಾಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಮಹತ್ವವಾಗಿದದ್ದು, ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ದೇಶದ ಏಳಿಗೆಯ ಕುರಿತಾಗಿ ಚಿಂತಿಸಿ ಕಾರ್ಯೋನ್ಮುಖರಾಗಬೇಕೆಂದು ಕರೆಯಿತ್ತರು.
ಪ್ರಧಾನ ಉಪನ್ಯಾಸಗೈದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್.ನಾಯಕ್ ಮುಂದಿನ ಜನಾಂಗವೆಂದೇ ಕರೆಯಲ್ಪಡುವ ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲೆ ನಾಯಕತ್ವದ ಗುಣಗಳನ್ನು ಬೆಳಸುವ ವೇದಿಕೆಯೇ ವಿದ್ಯಾರ್ಥಿಸಂಘವಾಗಿದೆ. ಇದರಲ್ಲಿ ಸಕ್ರೀಯರಾದಲ್ಲಿ ಮುಂದೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದೆಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ.ವಿ.ಗಾಂವ್ಕರ ವಹಿಸಿ ಪ್ರತಿಭಾನ್ವಿತ ಪ್ರತಿನಿಧಿಗಳನ್ನೊಳಗೊಂಡ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಸಿ ಮಾರ್ಗದರ್ಶಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರಮೇಶ್.ಹೆಚ್.ಕುಂದರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಪಾರ್ವತಿ ಹಂದೆ, ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ, ಕಾರ್ಯದರ್ಶಿ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಗೀತಾನಂದ ಫೌಂಡೇಶನ್ ವತಿಯಿಂದ ವರ್ಷಂಪ್ರತಿ ನೀಡಲಾಗುವ ಪ್ರೋತ್ಸಾಹಧನವನ್ನು ಆನಂದ.ಸಿ.ಕುಂದರ್ ವಿತರಿಸಿದರು. ಒಟ್ಟು 51 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು. ರೋವರ್-ರೇಂಜರ್ ಸ್ವಯಂಸೇವಕರ ನಿಪುಣ್ ಪರೀಕ್ಷಾ ತೇರ್ಗಡೆಯಾದ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ ಸ್ವಾಗತಿಸಿದರು. ಐ.ಕ್ಯೂ.ಎ.ಸಿ ಸಂಚಾಲಕರಾದ ರವಿಪ್ರಸಾದ್ ಕೆ.ಜಿ ವಂದಿಸಿದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಮಂಜುನಾಥ ಆಚಾರಿ ಎಳ್ಳಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು.