ಕುಂದಾಪುರ ಮಿರರ್ ಸುದ್ದಿ…
ಬೈಂದೂರು: ಪ್ರಧಾನಿ ನರೇಂದ್ರ ಮೋದಿಜೀರವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ದೇಶವನ್ನು ಬಲಿಷ್ಠಗೊಳಿಸುವ, ಅಭಿವೃದ್ಧಿಪರ ಮತ್ತು ಜನಪರ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡಿರುವ ಸ್ಪಷ್ಟ ಉದಾಹರಣೆಯಾಗಿ ದೇಶದಲ್ಲಿ ಇತ್ತೀಚೆಗೆ ನಡೆದಂತಹ ಪಂಚರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಉತ್ತರಪ್ರದೇಶ ಮತ್ತು ಮಣಿಪುರಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಹಾಗೂ ಉತ್ತರಖಂಡ್ ಮತ್ತು ಹಾಗೂ ಗೋವಾದಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವುದೇ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ದೇಶದ ಎಲ್ಲ ಮೂಲೆಗಳಲ್ಲಿ ಭಾರತೀಯ ಜನತಾ ಪಕ್ಷ ತನ್ನ ಛಾಪನ್ನು ಮೂಡಿಸಿದ್ದು ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಂಜಾಬ್ ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೇಸ್ ಅಲ್ಲಿಯೂ ಸಹ ತನ್ನ ಅಸ್ತಿತ್ವಕಳೆದುಕೊಂಡಿದ್ದು, ಕಾಂಗ್ರೆಸ್ ಪಕ್ಷವು ದಿನೇ ದಿನೇ ದೇಶದಲ್ಲಿ ಸಂಪೂರ್ಣವಾಗಿ ಅವನತಿಯಾಗಲಿದೆ ಎಂಬುದನ್ನು ಈ ಚುನಾವಣೆಗಳು ಸಾಬೀತುವಡಿಸಿದೆ.
ಗೋವಾದಲ್ಲಿ ಸರ್ಕಾರ ರಚನೆ ಮಾಡಲು ಡಿ.ಕೆ. ಶಿವಕುಮಾರ್ ಮತ್ತು ಉತ್ತರಖಂಡದಲ್ಲಿ ಸರ್ಕಾರ ರಚನೆ ಮಾಡಲು ಎಂ.ಬಿ. ಪಾಟೀಲರವರು ಹೋಗಿದ್ದು, ಬರಿಗೈಲಿ ವಾಪಸಾಗಬೇಕಾಯಿತು.
ಕಾಂಗ್ರೆಸ್ ಪಕ್ಷದವರು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆಂದು ಹಗಲು ಕನಸು ಕಾಣುತ್ತಿರುವುದು. ಕನಸ್ಸಾಗಿಯೇ ಉಳಿಯುವುದು ಈ ಫಲಿತಾಂಶ ಸಾಬೀತುಪಡಿಸಿದೆ. ಕಾಂಗ್ರೆಸ್ ಪಕ್ಷದವರು ಕರ್ನಾಟಕ ರಾಜ್ಯದಲ್ಲಿ ಹಲವು ಸಲ ಕೀಳು ಮಟ್ಟದ ರಾಜಕೀಯ ಮಾಡಿದ್ದನ್ನು ಇಡೀ ಜನತೆಯು ಗಮನಿಸುತ್ತಲೇ ಬಂದಿದ್ದು, ಮುಂಬರುವ ರಾಜ್ಯದ ಚುನಾವಣೆಯಲ್ಲಿ ಮತ್ತೊಮ್ಮೆ ಬಿ.ಜೆ.ಪಿ. ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ಭರವಸೆ ನನಗಿದೆ ಎಂದು ಅವರು ಸಂತಷ ಹಂಚಿಕೊಂಡಿದ್ದಾರೆ.