ಕಂದಾವರ: ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ವಿದ್ಯಾರ್ಥಿಗಳ ಭೇಟಿ

0
481

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಕುಂದಾಪುರದ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಕುಂದಾಪುರ ಸ.ಪ.ಪೂ.ಕಾಲೇಜು ಪ್ರೌಢಶಾಲೆಯ ಎನ್.ಎಸ್.ಎಸ್. ಹಾಗೂ ವಿದ್ಯಾರ್ಥಿಗಳು ಭೇಟಿ ನೀಡಿದರು.
ಕುಂದಾಪುರ ನಗರದಲ್ಲಿ ಸಂಗ್ರಹವಾಗುವ ಕಸವನ್ನು ವೈಜ್ಞಾನಿಕ ರೀತಿಯಲ್ಲಿ ವಿಂಗಡನೆ ಮಾಡಿ, ಸಂಪನ್ಮೂಲವಾಗಿಯೂ ಪರಿವರ್ತನೆ ಮಾಡುವ ಬೃಹತ್ ಘಟಕವನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.
ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ದಿನ ಕುಂದಾಪುರ ನಗರ ವ್ಯಾಪ್ತಿಯ 13ರಿಂದ 15 ಟನ್ ಕಸ ಇಲ್ಲಿಗೆ ಬರುತ್ತಿದ್ದು ಅವುಗಳನ್ನು ಪ್ರತ್ಯೇಕ ಪ್ರತ್ಯೇಕವಾಗಿ ಯಂತ್ರಗಳ ಸಹಾಯದಿಂದ ವಿಂಗಡನೆ ಮಾಡಲಾಗುತ್ತಿದೆ. ದಿನಕ್ಕೆ 4 ಟನ್ ಹಸಿ ಕಸ ಬರುತ್ತಿದ್ದು ಅವುಗಳನ್ನು ಕೂಡ ವ್ಯವಸ್ಥಿತವಾಗಿ ಬೇರ್ಪಡಿಸಿ 45 ದಿನಗಳ ಕಾಲ ವೈಜ್ಞಾನಿಕ ಮಾದರಿಯಲ್ಲಿ ಇರಿಸಿ ಗೊಬ್ಬರವನ್ನಾಗಿ ಪರಿವರ್ತನೆ ಮಾಡಿ ಕೃಷಿಕರಿಗೆ ಮಾರಾಟ ಮಾಡಲಾಗುತ್ತಿದೆ. ವಿಶೇಷವಾಗಿ ಕೋಳಿ ತ್ಯಾಜ್ಯವನ್ನು ಕೂಡಾ ಸಂಗ್ರಹಿಸಿ ಅದನ್ನು ಕೂಡಾ ವಿಶೇಷ ಘಟಕಗಳಲ್ಲಿ ವಿಲೇ ಮಾಡುತ್ತಿದ್ದು ಉತ್ಕøಷ್ಟ ಗೊಬ್ಬರವನ್ನಾಗಿ ಪರಿವರ್ತನೆ ಮಾಡಲಾಗುತ್ತದೆ ಎಂದರು.

Video:

Click Here


ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತ್ಯಾಜ್ಯ ವಿಲೇವಾರಿಯ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಬೇಕು. ಈ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಸುಂದರ ನಗರ ನಿರ್ಮಾಣದಲ್ಲಿ ಕಸವಿಲೇವಾರಿಯೂ ಪ್ರಮುಖವಾಗುತ್ತದೆ ಎಂದರು.
ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಉದಯ ಮಡಿವಾಳ ಮಾತನಾಡಿ, ಇವತ್ತು 130 ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಾಗೂ ಕಾಲೇಜಿನ 150 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ನಗರದಲ್ಲಿ ಸಂಗ್ರಹವಾಗುವ ಕಸದ ವಿಲೇವಾರಿ ಹೇಗೆ ಆಗುತ್ತದೆ ಎನ್ನುವ ಅರಿವು ಹಾಗೂ ಜವಬ್ದಾರಿ ಇರುವುದರಿಂದ ಈ ಭೇಟಿ ಅತ್ಯುಪಯೂಕ್ತವಾಗುತ್ತದೆ ಎಂದರು.
ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಇಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯವನ್ನು ವಿಂಗಡನೆಯಾಗುತ್ತಿದ್ದು ತ್ಯಾಜ್ಯ ದುರ್ನಾತ ಬೀರುವುದಿಲ್ಲ. ಗೊಬ್ಬರದ ವಾಸನೆ ಇಲ್ಲಿ ಗಮನಿಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಉಪಧ್ಯಕ್ಷ ಸಂದೀಪ ಖಾರ್ವಿ, ನಾಮ ನಿರ್ದೇಶಿತ ಸದಸ್ಯೆ ಪುಷ್ಪ ಶೇಟ್, ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಪುರಸಭೆಯ ಪರಿಸರ ಅಭಿಯಂತರ ಗುರುಪ್ರಸಾದ್ ಶೆಟ್ಟಿ, ಕಂದಾಯ ನಿರೀಕ್ಷಕಿ ಜ್ಯೋತಿ, ಆರೋಗ್ಯ ನಿರೀಕ್ಷಕ ರಾಘವೇಂದ್ರ ನಾಯಕ್, ಗಣೇಶ ಕುಮಾರ್ ಜನ್ನಾಡಿ, ಪ.ಪೂ.ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here