ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಮಾರ್ಚ್ 12 ರಂದು ಆರೋಗ್ಯವೃದ್ಧಿಗಾಗಿ ಧನ್ವಂತರಿ ಯಾಗ ಸಕಲ ಧಾರ್ಮಿಕ ವಿಧಿವಿದಾನಗಳೊಂದಿಗೆ ಶ್ರೀ ಗುರು ಪರಾಶಕ್ತಿ ಮಠ ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳ ಅನುಗ್ರಹದೊಂದಿಗೆ, ವಿದ್ವಾನ್ ಕೋಟ ಕೆ. ಚಂದ್ರಶೇಖರ ಸೋಮಯಾಜಿ ಅವರ ನೇತ್ರತ್ವದಲ್ಲಿ ಸಾಂಗವಾಗಿ ನೆರವೇರಿತು.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯಾಗ, ಮಹಾಪೂಜೆ, ಅನ್ನಸಂತರ್ಪಣೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಳದ ಉತ್ಸವ ಸಮಿತಿ ಗೌರವಾಧ್ಯಕ್ಷ ಸೀತಾರಾಮ ಹೇರಿಕುದ್ರು, ಅಧ್ಯಕ್ಷ ಪ್ರಕಾಶ್ ಕೆ.ಬಿ., ಶ್ರೀ ಮೈಲಾರೇಶ್ವರ ದೇವಸ್ಥಾನದ ಅಧ್ಯಕ್ಷ ರಮೇಶ್ ಬಿಲ್ಲವ, ಶ್ರೀ ಬಗಳಾಂಬ ತಾಯಿ ದೇವಳದ ಅರ್ಚಕ ಗಣಪತಿ ಸುವರ್ಣ, ಜಲಜ ಸುವರ್ಣ ಇನ್ನಿತರರು ಉಪಸ್ಥಿತರಿದ್ದರು.