ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ಮಗನೇ ತಂದೆಯನ್ನು ಹತ್ಯೆಗೈದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಕೊಲೆಯಾದವರನ್ನು ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ(74), ಆರೋಪಿ ಪುತ್ರನನ್ನು ರಾಘವೇಂದ್ರ (36) ಎಂದು ಗುರುತಿಸಲಾಗಿದೆ.
ಕೌಟುಂಬಿಕ ದ್ವೇಷ ಹಿನ್ನೆಲೆಯಲ್ಲಿ ಮಗ ತಂದೆಯನ್ನೇ ಸಣ್ಣ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕುಂದಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.