ಅಮಾಸೆಬೈಲು : ಹೊಳೆಗೆ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು

0
2521

ಕುಂದಾಪುರ ಮಿರರ್ ಸುದ್ದಿ

ಕುಂದಾಪುರ: ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ‌ 18 ವರ್ಷ ಪ್ರಾಯದ ವಿದ್ಯಾರ್ಥಿಗಳಿಬ್ಬರು ಹೊಳೆಯಲ್ಲಿ ನೀರಿನಲ್ಲಿ‌ ಮುಳುಗಿ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಕಳೀನಜೆಡ್ಡು ಹೊಳೆಯಲ್ಲಿ ಗುರುವಾರ ನಡೆದಿದೆ.

Click Here

Click Here

ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ಮೃತ ದುರ್ದೈವಿಗಳು.

ಘಟನೆ ವಿವರ:
ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದ ಸುಮಂತ್ ಹಾಗೂ ಗಣೇಶ್ ಸ್ನೇಹಿತರಾಗಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ಹೊಳೆ ಬಳಿ ತೆರಳಿದ್ದು ಸ್ನಾನಕ್ಕೆಂದು ನೀರಿಗಿಳಿದಾಗ ಸೆಳೆತಕ್ಕೆ ಸಿಕ್ಕು ಕೊಚ್ಚಿ ಹೋಗಿದ್ದಾರೆನ್ನಲಾಗಿದೆ. ಇದನ್ನು ಕಂಡ ವ್ಯಕ್ತಿಯೊಬ್ಬರ ಮಾಹಿತಿಯಂತೆ ಸ್ಥಳೀಯರು ರಕ್ಷಿಸಲು ಮುಂದಾದರೂ‌ ಕೂಡ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಅಮಾಸೆಬೈಲು ಪಿಎಸ್ಐ ಸುಬ್ಬಣ್ಣ,    ಮಾಜಿ ಜಿ.ಪಂ.ಸದಸ್ಯ ರೋಹಿತ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

Click Here

LEAVE A REPLY

Please enter your comment!
Please enter your name here