ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಭಾರತೀಯ ಜನತಾ ಪಾರ್ಟಿಯು ಕಾರ್ಯಕರ್ತರ ಆಧಾರಿತ ಸಂಘಟನೆಯಾಗಿದ್ದು ದೇಶಭಕ್ತಿ ಮತ್ತು ರಾಷ್ಟ್ರವಾದಿ ರಾಜಕಾರಣವನ್ನು ಮಾಡಿ ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರನಿರ್ಮಾಣದ ತತ್ವವನ್ನು ನಂಬಿಕೊಂಡು ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಮೂಲ ತತ್ವದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ ನಮ್ಮದು ಎಂದು ಜಿಲ್ಲಾ ಉಪಾಧ್ಯಕ್ಷರು ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ತೆಕ್ಕಟ್ಟೆಯ ಸುಧೀಂಧ್ರ ತೀರ್ಥ ಸಭಾಭವನದಲ್ಲಿ ನಡೆದ ಕುಂದಾಪುರ ಮಂಡಲದ ವಿಶೇಷ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು ಕುಂದಾಪುರ ವಿಧಾನಸಭಾ ಕ್ಷೇತ್ರ ಸಂಘಟನಾತ್ಮಕವಾಗಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಇಡೀ ರಾಜ್ಯಕ್ಕೆ ಮಾದರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯನ್ನು ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಉದ್ಘಾಟಿಸಿದರು.
ಕುಂದಾಪುರ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಅಧ್ಯಕ್ಷತೆಯನ್ನು ವಹಿಸಿದರು.
ಕರ್ನಾಟಕ ರಾಜ್ಯ ಆಹಾರ ನಿಗಮ ಮಂಡಳಿಯ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಹಿಂದುಳಿದ ವರ್ಗ ಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಠಲ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾಧ್ಯಕ್ಷ ಗೋಪಾಲ್ ಕಳಂಜೆ, ತೆಕ್ಕಟ್ಟೆ ಶಕ್ತಿಕೇಂದ್ರದ ಅಧ್ಯಕ್ಷ ಕಿರಣ್ ಕುಮಾರ್ ಉಪಸ್ಥಿತರಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಸ್ವಾಗತಿಸಿದರು, ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ ವಂದೇ ಮಾತರಂ ಗೀತೆ ಹಾಡಿ, ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಧನ್ಯವಾದ ಸಮರ್ಪಿಸಿದರು.