ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಭಾರತೀಯ ಜನತಾ ಪಕ್ಷ ಕುಂದಾಪುರ ನಗರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ ಪಕ್ಷದ ಕಚೇರಿಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಜೇಶ್ ಕಡ್ಗಿಮನೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಬೂತ್ ಮಟ್ಟದಲ್ಲಿ ಬಲಪಡಿಸಿ ಸಶಕ್ತ ಬೂತ್ ಸಧೃಡ ಭಾರತ ಎಂಬ ಪಕ್ಷದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರು ಕಾರ್ಯಪ್ರವೃತ್ತರಾಗುವ ಬಗ್ಗೆ, ಬೂತ್ ಮಟ್ಟದಲ್ಲಿ ಸರ್ಕಾರದ ವಿವಿಧ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು ನಿರಂತರವಾಗಿ ಸಾರ್ವಜನಿಕರ ಸಂಪರ್ಕದಲ್ಲಿರುವ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೆಂಡನ್, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ನಗರ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಎಸ್ ಪೂಜಾರಿ, ಪುರಸಭೆ ಉಪಾಧ್ಯಕ್ಷ ಸಂದೀಪ್ ಖಾರ್ವಿ, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಜಿಕೆ, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪುರಸಭೆ ಸ್ಥಾಯಿ ಸಮಿತಿ ಸದಸ್ಯರಾದ ರತ್ನಾಕರ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್ ವಂದೇ ಮಾತರಂ ಗೀತೆ ಹಾಡಿದರು.