ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ 2019-20 ನೇ ಸಾಲಿನ ಫೆಬ್ರವರಿ 2021 ರಲ್ಲಿ ನಡೆದ ಬಿ.ಎಡ್ ಪದವಿಯ ಅಂತಿಮ ಪರೀಕ್ಷೆಯಲ್ಲಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ದಿವ್ಯಶ್ರೀ.ಕೆ ಇವರು ಶೇಕಡಾ 85.75 ಅಂಕಗಳೊಂದಿಗೆ 8ನೇ ರ್ಯಾಂಕ್ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ರ್ಯಾಂಕ್ ಗಳಿಸಿದ ವಿದ್ಯಾರ್ಥಿನಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು, ಕೋಡಿ, ಕುಂದಾಪುರ ಇದರ ಅಧ್ಯಕ್ಷರಾದ ಹಾಜಿ ಕೆ.ಎಮ್ ಅಬ್ದುಲ್ ರೆಹಮಾನ್, ಸಂಚಾಲಕರಾದ ಸಯ್ಯದ್ ಮಹಮ್ಮದ್ ಬ್ಯಾರಿ, ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.