ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕು ಸಿದ್ಧಾಪುರದ ಸರ್ಕಾರಿ ಪ್ರೌಢಶಾಲೆ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿದೆ.
ಈ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ಶೆಟ್ಟಿ 625ರಲ್ಲಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ರಿತಿಕಾ ಶೆಟ್ಟಿ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
625 ಅಂಕ ಗಳಿಸಿರುವ ವೈಷ್ಣವಿ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟವನ್ನು ಪ್ರತಿನಿಧಿಸಿದ್ದರು. ಇವರು ವಸಂತ ಶೆಟ್ಟಿ-ಸುಷ್ಮಾ ಸಿದ್ಧಾಪುರ ಇವರ ಪುತ್ರಿ.
624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವ ರಿತಿಕಾ ಶೆಟ್ಟಿ ಶಂಕರ ಶೆಟ್ಟಿ ಮತ್ತು ನಾಗರತ್ನ ಬಾಳೆಜೆಡ್ಡು ಹೊಸಂಗಡಿ ಇವರ ಪುತ್ರಿ.