ಉಪ್ಪುಂದ ದುರ್ಗಾಪರಮೇಶ್ವರಿ ದೇವಸ್ಥಾನ ಶತಚಂಡಿಕಾ ಯಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿ

0
646
ಕುಂದಾಪುರ ಮಿರರ್ ಸುದ್ದಿ…
ಬೈಂದೂರು:  ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನೂತನ ರಾಜಗೋಪುರ ಸಮರ್ಪಣೆಯ ಅಂಗವಾಗಿ  ಶುಕ್ರವಾರ ಬೆಳಿಗ್ಗೆ  ರಾಜಗೋಪುರದ ಕಳಶ ಸ್ಥಾಪನೆ, ಶತಚಂಡಿಕಾ ಯಾಗ ನಡೆಯಿತು.
ಶತಚಂಡಿಕಾ ಯಾಗ ಪೂರ್ಣಾಹುತಿಯಲ್ಲಿ  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಪಾಲ್ಗೊಂಡರು.ಅವರನ್ನು ಉದ್ಯಮಿ ಯು.ಬಿ ಶೆಟ್ಟಿ ದಂಪತಿಗಳು ಡಿ.ಕೆ ಶಿವಕುಮಾರ್ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು, ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಎಲ್ಲರ ಕಷ್ಟಗಳನ್ನು ದೂರ ಮಾಡಿ ಸುಖ ಶಾಂತಿಯನ್ನು ನೀಡಲಿ, ಯು.ಬಿ ಶೆಟ್ಟಿಯವರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಈ ಸೇವೆ ಮಾಡಿದ್ದಾರೆ. ಈ ಪವಿತ್ರವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಸಂತೋಷವಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ ಕುಮಾರ್ ಕೊಡವೂರು, ಮಾಜಿ ಶಾಸಕ ಯು.ಸಭಾಪತಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Click Here

LEAVE A REPLY

Please enter your comment!
Please enter your name here