ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಯಕ್ಷಗಾನ ಕಲೆಯನ್ನು ಪ್ರಾಥಮಿಕ ಶಿಕ್ಷಣದ ಹಂತದಲ್ಲಿಯೇ ಕಲಿಯುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುಂದೆ ಯಕ್ಷಗಾನದ ದೊಡ್ಡ ಕಲಾವಿದರಾಗದಿದ್ದರೂ, ಯಕ್ಷಗಾನದ ಅಭಿಮಾನಿಗಳಾಗಿ ಈ ಕಲೆಯನ್ನು ಉಳಿಸಿ ಬೆಳೆಸಿ” ಎಂದು ಯಕ್ಷಗಾನ ಕ್ಷೇತ್ರದ ಪ್ರಸಿದ್ಧ ಹಾಸ್ಯ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ಹೇಳಿದರು.
ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯಕ್ಷಗಾನದ ಹೆಜ್ಜೆ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.
ಶಾಲಾ ಮುಖ್ಯ ಶಿಕ್ಷಕರಾದ ಶೇಖರ ಕುಮಾರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕ್ರತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ ಕೆ ಎನ್, ಯಕ್ಷಾಂತರಂಗದ ಕಾರ್ಯದರ್ಶಿ ಕೃಷ್ಣಮೂರ್ತಿ ಉರಾಳ, ತಾಳಮದ್ದಳೆ ಅರ್ಥಧಾರಿ ಆರ್ ಎಂ ನಾಯಕ್, ಭಾಗವತರಾದ ಪ್ರಸಾದ್ ಕುಮಾರ ಮೊಗೆಬೆಟ್ಟು, ಕೊರ್ಗಿ ಗ್ರಾಮ ಪಂಚಾಯಿತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ, ಯಕ್ಷಗುರು ಐರೋಡಿ ಮಂಜುನಾಥ ಕುಲಾಲ್, ಶಾಲಾ ಸಹಶಿಕ್ಷಕರಾದ ಎಂ ಸಂಜೀವ ಮೊಗವೀರ, ಜಯಲಕ್ಷ್ಮಿ ಬಿ, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ, ಗೌರವ ಶಿಕ್ಷಕಿ ಮಧುರಾ ಉಪಸ್ಥಿತರಿದ್ದರು.
ಸಹಶಿಕ್ಷಕ ಜಯರಾಮ ಶೆಟ್ಟಿ ಸ್ವಾಗತಿಸಿದರು. ಸಹಶಿಕ್ಷಕಿ ವಿಜಯಾ ಆರ್ ವಂದಿಸಿದರು. ಸಹಶಿಕ್ಷಕ ರವೀಂದ್ರ ನಾಯಕ್ ನಿರೂಪಿಸಿದರು.