ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ ನೆಂಪು ಇಲ್ಲಿಯ ಹಳೆವಿದ್ಯಾರ್ಥಿಗಳ ಸಂಘದ ವತಿಯಿಂದ 2021-22ನೇ ಸಾಲಿನ ದ್ವಿತೀಯ ಪಿ.ಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನೆಂಪು ಸಂತೋಷ ಕುಮಾರ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಗೌರವ ಅಧ್ಯಕ್ಷರಾದ ನಾರಾಯಣ ಶೆಟ್ಟಿ, ಪ್ರಾಂಶುಪಾಲರಾದ ರಾಜು ನಾಯಕ್, ಉದ್ಯಮಿ ಗಣೇಶ್ ಶೆಟ್ಟಿ, ಕಿಶನ್ ಕುಮಾರ್ ಶೆಟ್ಟಿ, ಸಂದೀಪ್ ಶಾರಾಳ, ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.
ಹಳೆವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕರು, ಅಧ್ಯಾಪಕ ವೃಂದದವರು ಹಾಜರಿದ್ದರು.
ಹಳೆವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಚಿತ್ತೂರು ರವಿರಾಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕ ವಸಂತರಾಜ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ವೆಂಕಟರಮಣ ವಂದಿಸಿದರು.