ಕುಂದಾಪುರ ಮಿರರ್ ಸುದ್ದಿ…
ಕೋಟ: ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸುವುದರಿಂದ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ಹೇಳಿದರು.
ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಇದರ ಅಧೀನಕ್ಕೊಳಪಟ್ಟ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಬೆಳ್ಳಿ ಹಬ್ಬದ ಅಂಗವಾಗಿ ಗೀತಾನಂದ ಫೌಂಡೇಶನ್ ಮಣೂರು,ಗಿಳಿಯಾರು ಯುವಕ ಮಂಡಲ,ಮಣೂರು ಫ್ರೆಂಡ್ಸ್,ಯಕ್ಷಸೌರಭ ಕಲಾರಂಗ ಕೋಟ,ಹಂದಟ್ಟು ಮಹಿಳಾ ಬಳಗ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಗೆಳೆಯರ ಬಳಗ ಕಾರ್ಕಡ,ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪರಿಸರಸ್ನೇಹಿ ಸರಣಿ ಮಾಹಿತಿ ಕಾರ್ಯಗಾರ 3ನೇ ಮಾಲಿಕೆ ಶನಿವಾರ ಆಯೋಜಿಸಲಾದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ಯುವ ಸಮುದಾಯ ಪ್ರಕೃತಿಯನ್ನು ಉಳಿಸಿ ಬೆಳೆಸಲು ಬಹುಮುಖ್ಯ ಪಾತ್ರ ವಹಿಸುವ ಅಗತ್ಯತೆ ಇದೆ ಹಾಗೂ ತ್ಯಾಜ್ಯ ಎಸೆಯುವ ಮನಸ್ಥಿತಿ ಅದರಿಂದಾಗುವ ಅನಾಹುತ,ಪ್ರಸ್ತುತ ಗಿಡನೆಟ್ಟು ಪೆÇೀಷಿಸುವ ಮಾಹಿತಿ ಸಮರ್ಪಕವಾಗಿ ಪಡೆದು ನಮ್ಮ ನಮ್ಮ ಮನೆಯಲ್ಲಿ ಅನುಷ್ಠಾನಗೊಳಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ಇತ್ತರಲ್ಲದೆ ಪ್ರಸ್ತುತ ಕಂಡಕಂಡಲ್ಲಿ ಖರೀದಿಸುವ ವಿಷಕಾರಕ ಆಹಾರ ಪದಾರ್ಥಗಳಿಂದ ದೂರವಿರಲು ತಿಳಿಹೇಳಿದರು,ನಮ್ಮ ಪರಿಸರವನ್ನು ಶುಚಿಯಾಗಿಟ್ಟು ಹಸಿರು ಕ್ರಾಂತಿ ಪಸರಿಸುವ ಕಾರ್ಯಕ್ರಮ ಆಯೋಜಿಸಿರುವ ಪಂಚವರ್ಣ ಯುವಕ ಮಂಡಲ ಹಾಗೂ ಇತರ ಸಂಘಸಂಸ್ಥೆಗಳ ಕಾರ್ಯವನ್ನು ಪ್ರಶಂಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕೋಟ ಗ್ರಾಮಪಂಚಾಯತ್ ಘನ ಹಾಗೂ ದ್ರವ ತ್ಯಾಜ್ಯ ವಿಲೇವಾರಿ ಘಟಕದ ಮುಖ್ಯಸ್ಥೆ ಲೋಲಾಕ್ಷಿ ಕೋತ್ವಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿ ಪರಿಸರ ಸ್ವಚ್ಛತೆ,ಹಸಿರು ಕ್ರಾಂತಿ ಸೃಷ್ಠಿಸುವಲ್ಲಿ ಪುಟಾಣಿಗಳ ಪಾತ್ರದ ಕುರಿತು ಸವಿಸ್ತರವಾಗಿ ಮಾಹಿತಿ ನೀಡಿದರು.
ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಪ್ರಭಾಕರ್ ಕಾಮತ್ ವಹಿಸಿದ್ದರು.ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರವೀಂದ್ರ ಕಾಮತ್,ಪಂಚವರ್ಣದ ಸ್ಥಾಪಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಘಟಕದ ಸಂಚಾಲಕಿ ಪುಷ್ಭಾ ಕೆ ಹಂದಟ್ಟು,ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷ ಮನೋಜ್ ಕುಮಾರ್ ಉಪಸ್ಥಿತರಿದ್ದರು. ಪಂಚವರ್ಣ ಯುವಕ ಮಂಡಲದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು.ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ಕಾರ್ಯಕ್ರಮ ನಿರ್ವಹಿಸಿದರು.ಶಾಲೆಯ ದೈಹಿಕ ಶಿಕ್ಷಕ ಸತ್ಯನಾರಾಯಣ ವಂದಿಸಿದರು.