ಕುಂದಾಪುರ ಮಿರರ್ ಸುದ್ದಿ…
ಕೋಟ: ನೂತನ ರಾಜ್ಯಸಭಾ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ ರಾಜ್ಯಾಧ್ಯಕ್ಷ ದೇವದಾಸ್ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷ ಅಪ್ಪಣ್ಣ ಹೆಗ್ಡೆ, ಪ್ರಾದೇಶಿಕ ನಿರ್ದೇಶಕ ವಿನ್ಸೆಂಟ್ ಪಾಯಸ್, ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಜಿಲ್ಲಾ ಹಿರಿಯ ನಿರ್ದೇಶಕ ಶಿವರಾಯ ಪ್ರಭು, ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಅಚ್ಯುತ ಪೂಜಾರಿ, ಸುಭಾಷ್ ಚಂದ್ರ ಚೌಟ,ಜನಜಾಗೃತಿ ವೇದಿಕೆ ಕೋಟ ವಲಯದ ಅಧ್ಯಕ್ಷ ಎಂ ಜಯರಾಮ ಶೆಟ್ಟಿ , ಜಿಲ್ಲಾ ಸಮಿತಿ ಸದಸ್ಯರಾದ ಹರೀಶ್ ಶೆಟ್ಟಿ ಚೇರ್ಕಾಡಿ, ಎ.ಶಿವಕುಮಾರ್ ಅಂಬಲಪಾಡಿ, ಸತ್ಯಾನಂದ ನಾಯಕ್ ಆತ್ರಾಡಿ, ಹರಿಶ್ಚಂದ್ರ ತೆಂಡೂಲ್ಕರ್ ಮಾಳ, ಕಮಲಾಕ್ಷ ನಾಯಕ್, ಪ್ರೇಮ್ ಕುಮಾರ್ ಜೈನ್ ಹೊಸ್ಮಾರ್, ಮಂಜು ಬಿಲ್ಲವ ಕುಂದಾಪುರ, ಯು.ಸುರೇಂದ್ರ ಶೆಣೈ, ನವೀನ್ ಚಂದ್ರ ಶೆಟ್ಟಿ, ಉದಯಕುಮಾರ್ ಶೆಟ್ಟಿ ಬೈಲೂರು, ಚಂದ್ರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.