ಕುಂದಾಪುರ ಮಿರರ್ ಸುದ್ದಿ…
ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ.ಪ್ರತಿಭಾ ಪಾಟೀಲ್ ನಂತರ ರಾಷ್ಟ್ರಪತಿ ಹುದ್ದೆಗೇರಿದ ಎರಡನೇ ಮಹಿಳೆ ದ್ರೌಪದಿ ಮುರ್ಮು.
ದೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೇರಿದ ಮೊದಲ ಆದಿವಾಸಿ ಮಹಿಳೆಯಾಗಿದ್ದಾರೆ. ರಾಷ್ಟ್ರಪತಿ ಪದವಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಸಂಜೆ ವೇಳೆ ಫಲಿತಾಂಶ ಪ್ರಕಟಿಸಲಾಗಿದೆ.
ದ್ರೌಪದಿ ಮುರ್ಮು ಅವರಿಗೆ 5,121 ಮತಗಳು ಬಿದ್ದಿವೆ. ಈ ಮತಗಳ ಒಟ್ಟು ಮೌಲ್ಯ 5,77,777 ಆಗಿದೆ. ಇನ್ನು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ 1,058 ಮತಗಳು ಬಿದ್ದಿದ್ದು ಇದರ ಮೌಲ್ಯ 2,61,062 ಆಗಿದೆ. ಹಾಲಿ ಚಲಾವಣೆಯಾಗಿರುವ ಮತಗಳ ಪೈಕಿ 15 ಸಂಸದರ ಮತಗಳು ಅಸಿಂಧು ಎಂದು ಘೋಷಿಸಲಾಗಿದೆ ಎಂದು ಪಿಸಿ ಮೋದಿ ತಿಳಿಸಿದ್ದಾರೆ. ಈ ಅಧ್ಯಕ್ಷೀಯ ಚುನಾವಣೆಯಲ್ಲಿ ಪ್ರತಿ ಸಂಸದರು 700 ಮತಗಳ ಮೌಲ್ಯವನ್ನು ಹೊಂದಿದೆ.