ಕುಂದಾಪುರ ಮಿರರ್ ಸುದ್ದಿ…
ಕೋಟ: ಇದೇ ಬರುವ ಅ.15ರಂದು ಸ್ವಾತ್ರಂತ್ರ್ಯೋತ್ಸವದ ಅಮೃತಮಹೋತ್ಸವದ ಹಿನ್ನೆಲೆ ಹರ್ ಘರ್ ತಿರಂಗಾ ಅಭಿಯಾನವನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕುರಿತಂತೆ ಪೂರ್ವಭಾವಿ ಸಭೆಯನ್ನು ಪಟ್ಟಣಪಂಚಾಯತ್ ಸಭಾಂಗಣದಲ್ಲಿ ನೆಡೆಸಲಾಯಿತು.
ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಎಸ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಅಮೃತಮಹೋತ್ಸವವನ್ನು ಅರ್ಥಪೂರ್ಣವಾಗಿಸುವ ಕುರಿತಂತೆ ಚರ್ಚೆ ನಡೆಸಿದರು .
ಸಭೆಯಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶಿವ ನಾಯ್ಕ, ಪಟ್ಟಣಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ ,ಗುಂಡ್ಮಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸತೀಶ್ ಐತಾಳ್ ,ಕಾರ್ಕಡ ಹೊಸ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಪ್ರಭಾಕರ ಕಾಮತ್,
ಪಟ್ಟಣ ಪಂಚಾಯತ್ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಸಿಬ್ಬಂಧಿವರ್ಗ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು,
ಸಂಘ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿರಿದ್ದರು. ಇದೇ ವೇಳೆ ಎರಡು ಸಾವಿರ ಧ್ವಜವನ್ನು ಪಟ್ಟಣಪಂಚಾಯತ್ ವತಿಯಿಂದ ಖರೀದಿಸಿ, ಹೆಚ್ಚುವರಿ ಧ್ವಜವನ್ನು ದಾನಿಗಳ ಮೂಲಕ ಮನೆ ಮನೆಗಳಿಗೆ ವಿತರಿಸಲು ತೀರ್ಮಾನಿಸಲಾಯಿತು.