ಕುಂದಾಪುರ ಮಿರರ್ ಸುದ್ದಿ…
ಕೋಟ: ಇತ್ತೀಚಿಗೆ ಸಾಲಿಗ್ರಾಮದ ಪಾರಂಪಳ್ಳಿ ಪಡುಕರೆಯಲ್ಲಿ ಸಾಂಪ್ರದಾಯಿಕ ದೋಣಿ ಮೀನುಗಾರಿಕೆಯಲ್ಲಿ ತೊಡಗಿಕೊಂಡಿರುವಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದುರ್ಮರಣಕ್ಕಿಡಾದ ಸಾಲಿಗ್ರಾಮ ಪಾರಂಪಳ್ಳಿ ಪಡುಕರೆ ಸುಮಂತ್ ಮೊಗವೀರ ಅವರ ಮನೆಗೆ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರಲ್ಲದೆ ಮೀನುಗಾರಿಕಾ ಸಚಿವರ ಮೂಲಕ ಸಂಪರ್ಕಿಸಿ ಗರಿಷ್ಟ ಮಟ್ಟದ ಆರ್ಥಿಕ ಸಹಾಯ ಒದಗಿಸುವುದಾಗಿ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತಿ ಸದಸ್ಯರಾದ ಕಾರ್ಕಡ ರಾಜು ಪೂಜಾರಿ,ಕೋಟ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಕುಂದರ್ ಐರೋಡಿ,ಸ್ಥಳೀಯರಾದ ಕೇಶವ ಕರ್ಕೇರ,ರವೀಂದ್ರ ತಿಂಗಳಾಯ,ಜನಾರ್ಧನ ಪೂಜಾರಿ,ಪ್ರಭಾಕರ್ ಕುಂದರ್,ಸಂತೋಷ ಕರ್ಕೆರ ಹಾಗು ಇತರರು ಉಪಸ್ಥಿತರಿದ್ದರು.