ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕುತ್ತೂರು ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆಯ ರಿಧಮಿಕ್ ಯೋಗ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿನಿ ಮಹಿಮಾ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಉದಯ ಮಡಿವಾಳ ಎಂ. ಮಾರ್ಗದರ್ಶನ ನೀಡಿದ್ದರು.